Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ವಾದ.. ವಿವಾದಕ್ಕೆಡೆಮಾಡಿ ಕೊಡದಿರಲಿ
ವಿಶೇಷ ಲೇಖನ

ವಾದ.. ವಿವಾದಕ್ಕೆಡೆಮಾಡಿ ಕೊಡದಿರಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ವೀಣಾ ಹೇಮಂತ್ ಗೌಡ ಪಾಟೀಲ್
ಮುಂಡರಗಿ
ಗದಗ ಜಿಲ್ಲೆ

ಉದಯರಶ್ಮಿ ದಿನಪತ್ರಿಕೆ

ನೀವು ಯಾರೊಂದಿಗಾದರೂ ವಾದ ಮಾಡುವಾಗ ಆ ವ್ಯಕ್ತಿಯಲ್ಲಿ ನಿಮ್ಮ ಮಾತುಗಳನ್ನು ಅರ್ಥಮಾಡಿಕೊಳ್ಳುವ ಮತ್ತೊಂದು ರೀತಿಯಲ್ಲಿ ಗ್ರಹಿಸುವ ಶಕ್ತಿ ಇದೆಯೇ ಎಂಬುದನ್ನು ಯೋಚಿಸಬೇಕು. ನಿಮ್ಮ ಮಾತುಗಳನ್ನು ಅವರು ಗ್ರಹಿಸಿಕೊಳ್ಳುವುದಿಲ್ಲ ಎಂದಾದರೆ ನೀವು ಅವರೊಂದಿಗೆ ಮಾತನಾಡುವುದರಲ್ಲಿ ಯಾವುದೇ ಅರ್ಥ ಇಲ್ಲ.
ಎಷ್ಟೋ ಬಾರಿ ನಾವು ಮಾಡುವ ಚರ್ಚೆ ಮತ್ತು ವಾದ ವಿವಾದಗಳು ನಮ್ಮ ಶಕ್ತಿಯ ವ್ಯಯವನ್ನು ಮಾತ್ರ ಮಾಡುತ್ತದೆ.
ಒಂದು ಅರ್ಥಪೂರ್ಣ ಸಂಭಾಷಣೆ ಮತ್ತು ಅನಗತ್ಯವಾದ ವಿವಾದಗಳ ನಡುವಿನ ವ್ಯತ್ಯಾಸವೇ ಇದು. ಅನೇಕ ಬಾರಿ ನಾವು ಅದೆಷ್ಟೇ ಸ್ಪಷ್ಟವಾಗಿ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೂ ಕೂಡ ತಿಳಿಯದವರಂತೆ ವರ್ತಿಸುತ್ತಾರೆ. ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುವುದೇ ಇಲ್ಲ. ಇದು ಒಂದು ರೀತಿಯಲ್ಲಿ ಮಲಗಿದಂತೆ ನಟನೆ ಮಾಡುವವರನ್ನು ಎಬ್ಬಿಸಿದಂತೆ.. ಎಂದೂ ಸಾಧ್ಯವಾಗುವುದಿಲ್ಲ. ಅವರು ಕೇಳಿದಂತೆ ನಟಿಸುತ್ತಾರೆ ಆದರೆ ಪ್ರತಿಕ್ರಿಯಿಸುವುದಿಲ್ಲ.


ತಮ್ಮದೇ ನಂಬಿಕೆಯ ಒಳ ಬಾಗಿಲನ್ನು ಚಿಲಕ ಹಾಕಿಕೊಂಡು ಕುಳಿತಿರುವ ಅವರು ಬೇರೆ ರೀತಿಯ ಗ್ರಹಿಕೆಗಳನ್ನು ಒಪ್ಪುವುದೇ ಇಲ್ಲ. ಅಂತಹವರೊಂದಿಗಿನ ಮಾತುಕಥೆಗಳು ನಮ್ಮನ್ನು ಖಾಲಿಯಾಗಿಸುತ್ತವೆ.
ಓರ್ವ ವ್ಯಕ್ತಿಯನ್ನು ನಾವು ಒಪ್ಪಿಕೊಳ್ಳದೆ ಇದ್ದಾಗಲೂ ಕೂಡ ಬೆಳವಣಿಗೆ ಮತ್ತು ತಿಳುವಳಿಕೆಯನ್ನು ಹೊಂದಿರುವ ಮತ್ತು ಅರ್ಥ ಮಾಡಿಕೊಳ್ಳುವ ಪ್ರಗತಿಯಲ್ಲಿ ಕೊಂಡೊಯ್ಯುವ ಜನರೊಂದಿಗೆ ಮುಕ್ತವಾಗಿ ಮಾತುಕತೆಯನ್ನು ನಡೆಸಬಹುದು. ಆದರೆ ತಮ್ಮ ಅನುಕೂಲವನ್ನು ಬಿಟ್ಟು ಬೇರಾವುದನ್ನು ನೋಡಲು ಇಚ್ಚಿಸದ ವ್ಯಕ್ತಿಯೊಂದಿಗೆ ಮಾತನಾಡುವುದು ಬಂಡೆಗಲ್ಲಿಗೆ ನಮ್ಮ ಹಣೆಯನ್ನು ನಾವೇ ಜಜ್ಜಿಕೊಂಡಂತೆ.ಯಾವುದೇ ರೀತಿಯ ತರ್ಕ ಮತ್ತು ಸತ್ಯಕ್ಕೆ ನಿಲುಕದ ಅವರನ್ನು ಒಪ್ಪಿಸುವುದು ಗುಡ್ಡಕ್ಕೆ ಕಲ್ಲು ಹೊತ್ತಂತೆ.
ಪ್ರಬುದ್ಧತೆ ಎನ್ನುವುದು ವಾದಗಳನ್ನು ಗೆಲ್ಲಲು ಅಲ್ಲ. ಪ್ರಭುದ್ಧತೆ ಎನ್ನುವುದು ವಾದ ಮಾಡುವುದರಲ್ಲಿ ಯಾವುದೇ ಹುರುಳಿಲ್ಲ ಎಂಬುದನ್ನು ಅರಿತಾಗ ಮೌನವಾಗಿ ಒಡಂಬಡುತ್ತದೆ. ನಾನು ಬದಲಾಗುವುದೇ ಇಲ್ಲ ನನ್ನ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂಬ ವ್ಯಕ್ತಿಯನ್ನು ಬದಲಾಯಿಸಲೇಬೇಕೆಂಬ ಹಟ, ಒಪ್ಪಿಸಿ ತೋರಿಸುತ್ತೇನೆ ಎಂಬ ಮೊಂಡತನಗಳು ನಿಜವಾಗಿಯೂ ಅಸಮಂಜಸ.
ಎಲ್ಲ ಯುದ್ಧಗಳನ್ನು ಹೋರಾಡಿ ಗೆಲ್ಲಬೇಕೆಂದಿಲ್ಲ ಅಂತೆಯೇ ನಾವು ಪ್ರತಿ ಬಾರಿಯೂ ಪ್ರತಿಯೊಬ್ಬರಿಗೂ ಎಲ್ಲದಕ್ಕೂ ವಿವರಣೆ ನೀಡಲೇ ಬೇಕಿಲ್ಲ.
ಕೆಲ ಬಾರಿ ನಾವು ಅತ್ಯಂತ ಸರಳವಾಗಿ ಆದರೆ ದಿಟ್ಟವಾಗಿ ತೆಗೆದುಕೊಳ್ಳಬಹುದಾದ ನಿರ್ಧಾರ ಎಂದರೆ ಸಮಸ್ಯೆಯನ್ನು ಸೃಷ್ಟಿಸುವ ಸ್ಥಳದಿಂದ, ವ್ಯಕ್ತಿಗಳಿಂದ ಸಂಬಂಧಗಳಿಂದ ದೂರವಾಗುವುದು. ಹಾಗೆ ಓಡಿ ಹೋಗುವುದು ಪಲಾಯನವಾದ ಎಂದೆನಿಸುವುದಿಲ್ಲವೇ ಎಂದು ನೀವು ಕೇಳಿದರೆ ನನ್ನ ಉತ್ತರ ಇಷ್ಟೇ ಅವರ ಮನಸ್ಸಿಗೆ ನಾಟುವಂತೆ ಹೇಳಲು ನಾವು ತಯಾರಿಸುತ್ತೇವೆ.
ಮತ್ತೆ ಕೆಲ ಬಾರಿ ಕೌಟುಂಬಿಕವಾಗಿ ನಾವು ಹೊಂದಾಣಿಕೆಗಳನ್ನು ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ಇರುತ್ತದೆ. ಅನಿವಾರ್ಯವಾಗಿಯಾದರೂ ಸಂಬಂಧಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ರೀತಿಯ ಹೊಂದಾಣಿಕೆ ಅತ್ಯವಶ್ಯಕ.. ಆದರೆ ನಿಮ್ಮನ್ನು ನೀವು ಕೀಳಾಗಿಸಿಕೊಂಡು ನಿಮ್ಮ ಆತ್ಮ ಗೌರವವನ್ನು ಕಳೆದುಕೊಂಡು ಹೊಂದಾಣಿಕೆ ಮಾಡಿಕೊಳ್ಳುವುದರಲ್ಲಿ ಯಾವುದೇ ಅರ್ಥ ಇಲ್ಲ ಅಂತಹ ಸಮಯದಲ್ಲಿ ನೀವು ಹೊಂದಾಣಿಕೆ ಮಾಡಿಕೊಳ್ಳುವ ವ್ಯಕ್ತಿ ನಿಮ್ಮ ಆ ರೀತಿಯ ಹೊಂದಾಣಿಕೆಗೆ ಯೋಗ್ಯನೇ ಎಂಬುದನ್ನು ನೀವು ಯೋಚಿಸಬೇಕು.
ತೀರ ನಿಮ್ಮ ಆತ್ಮ ಗೌರವವನ್ನು ಕಳೆಯುವಂತಹ ಸಮಯದಲ್ಲಿ ಅಂತಹ ವ್ಯಕ್ತಿಗಳೊಂದಿಗೆ ಒಂದಷ್ಟು ದೂರವನ್ನು ಹೊಂದಲೇಬೇಕು. ಅದು ನಿಮ್ಮ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯುತ್ತಮ.
ಇಲ್ಲದ ದಾಕ್ಷಿಣ್ಯ, ಭಿಡೆಗೆ ಒಳಗಾಗಿ ನಿಮ್ಮತನವನ್ನು ನೀವು ಕಳೆದುಕೊಳ್ಳಬೇಡಿ. ಅದಷ್ಟೇ ಆರ್ಥಿಕ ಸಾಮಾಜಿಕವಾಗಿ ಅವರು ನಿಮಗೆ ಸಹಾಯ ಮಾಡಿದ್ದರೂ ಸರಿಯೇ ಅವರ ಅವಮಾನವನ್ನು ಸಹಿಸುವ ಯಾವುದೇ ಅನಿವಾರ್ಯತೆ ನಿಮಗಿಲ್ಲ. ನಿಮ್ಮ ಭಾವನೆಗಳೊಂದಿಗೆ ಬೇರೆಯವರು ಆಟವಾಡಲು ಎಂದಿಗೂ ಅವಕಾಶ ಮಾಡಿಕೊಡಬೇಡಿ.
ಮತ್ತೆ ಕೆಲ ಜನರು ತಾವು ಹಿಡಿದ ಮೊಲಕ್ಕೆ ಮೂರೇ ಕಾಲು ಎಂಬಂತೆ ವರ್ತಿಸುತ್ತಾರೆ. ನೀವು ಅದೆಷ್ಟೇ ನಿಜವನ್ನು ಅವರಿಗೆ ಹೇಳಿ ಒಪ್ಪಿಸಲು ಪ್ರಯತ್ನಿಸಿದರೂ ಅವರು ತಮ್ಮದೇ ಆದ ವಾದಗಳನ್ನು ನಿಮ್ಮ ಮುಂದಿಟ್ಟು ನಿಮಗೆ ಸವಾಲು ಹಾಕುತ್ತಾರೆಯೇ ವಿನಃ
ಸರಿ ತಪ್ಪುಗಳು ಅವಲೋಕನ ಮಾಡುವುದಿಲ್ಲ. ಅಂತಹವರ ಮುಂದೆ ನಕ್ಕು ಸುಮ್ಮನಾಗಿ ಬಿಡುವುದು ಅತ್ಯುತ್ತಮ ಆಯ್ಕೆ.
ಆದರೆ ಎಲ್ಲರೂ, ಎಲ್ಲರನ್ನೂ, ಎಲ್ಲಾ ಕಾಲದಲ್ಲೂ ಒಪ್ಪಿಸಲು ಸಾಧ್ಯವಿಲ್ಲ. ಅಂತಹ ವ್ಯಕ್ತಿಗಳನ್ನು ಸರಿ ಎಂದು ಒಪ್ಪಿಕೊಳ್ಳಲು ನಿಮಗೆ ಸಾಧ್ಯವಾಗದಿದ್ದರೆ ನಕ್ಕು ಮುಂದೆ ಸಾಗಿ ಬಿಡಿ. ತಪ್ಪೆಂದು ತೋರಿದಾಗ ವಾದ ಮಾಡಿ ನಿಮ್ಮ ಶಕ್ತಿಯನ್ನು ವ್ಯಯ ಮಾಡಿಕೊಳ್ಳಬೇಡಿ.. ಸ್ನೇಹಿತರೆ ಬದುಕು ಬಲು ಚಿಕ್ಕದು. ಅನವಶ್ಯಕ ವಾದ ವಿವಾದಗಳಲ್ಲಿ ಸಿಲುಕಿಕೊಳ್ಳದೆ ಸುಂದರ ಬದುಕನ್ನು ಕಟ್ಟಿಕೊಳ್ಳೋಣ.. ಏನಂತೀರಾ ಸ್ನೇಹಿತರೆ??

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.