Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ “ವೀರರಾಣಿ ಕಿತ್ತೂರು” ಚೆನ್ನಮ್ಮ ಹೆಸರು
(ರಾಜ್ಯ ) ಜಿಲ್ಲೆ

ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ “ವೀರರಾಣಿ ಕಿತ್ತೂರು” ಚೆನ್ನಮ್ಮ ಹೆಸರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ “ವೀರರಾಣಿ ಕಿತ್ತೂರು” ಚೆನ್ನಮ್ಮ ಹೆಸರು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಬಸ್ ನಿಲ್ದಾಣ ಎಂದು ಹೆಸರು ನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ಹೃದಯ ಭಾಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಈಗಾಗಲೇ ಅಶ್ವಾರೂಢ ವೀರರಾಣಿ ಚೆನ್ನಮ್ಮನವರ ಪ್ರತಿಮೆ ಸ್ಥಾಪಿಸಲಾಗಿದೆ. ಶಕ್ತಿ ಯೋಜನೆ ಉದ್ಘಾಟನೆ ಸಂದರ್ಭದಲ್ಲಿ ಬಸ್ ನಿಲ್ದಾಣಕ್ಕೆ ರಾಣಿ ಚೆನ್ನಮ್ಮನವರ ಹೆಸರಿಡುತ್ತೇನೆ ಎಂದು ನಾನು ತಿಳಿಸಿದ್ದೆ. ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಮುಖ್ಯಮಂತ್ರಿಗಳು ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನವರ ಹೆಸರಿಡಲು ಅಗತ್ಯ ಕ್ರಮ ಕೈಗೊಳ್ಳಲು ಸಾರಿಗೆ ಸಚಿವರಿಗೆ ಸೂಚಿಸಿದ್ದರು. ನನ್ನ ಕೋರಿಕೆ ಹಾಗೂ ಮುಖ್ಯಮಂತ್ರಿಗಳ ಸೂಚನೆ ಪರಿಗಣಿಸಿ ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವೀರರಾಣಿ ಕಿತ್ತೂರು ಚೆನ್ನಮ್ಮನವರ ಹೆಸರು ನಾಮಕರಣ ಮಾಡಲು ಆದೇಶ ಹೊರಡಿಸಿದ್ದಾರೆ. ಅಲ್ಲದೇ, ವಿಜಯಪುರ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವೇಶ್ವರರ ಹೆಸರನ್ನು ನಾಮಕರಣಗೊಳಿಸಲಾಗಿದೆ. ಮಮದಾಪುರದಲ್ಲಿ 1200 ಎಕರೆ ಪ್ರದೇಶವನ್ನು ‘ಸಿದ್ದೇಶ್ವರ ಶ್ರೀ ಜೀವವೈವಿದ್ಯತೇಯ ಪಾರಂಪರಿಕ ಸಂರಕ್ಷಿತ ಅರಣ್ಯ ಪ್ರದೇಶ’ ಎಂದು ಈಗಾಗಲೇ ಹೆಸರಿಸಲಾಗಿದೆ. ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ನಾಮಕರಣಗೊಳಿಸಿದೆ. ಹೀಗೆ ಹಲವು ಪುಣ್ಯಪುರುಷರ ಹೆಸರು ನಾಮಕರಣಗೊಳಿಸುವುದರ ಮೂಲಕ ಅವರ ಆದರ್ಶಗಳು ಶಾಶ್ವತವಾಗಿ ಜನಮಾನಸದಲ್ಲಿ ನೆಲೆಗೊಳ್ಳುವಂತೆ ಮಾಡಲಾಗಿದೆ.
ವಿಜಯಪುರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೆ ಆಗಮಿಸುವ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಿರುವ ರಾಣಿ ಚೆನ್ನಮ್ಮನವರ ಬೃಹತ್ ಪ್ರತಿಮೆ ಅನಾವರಣ ಹಾಗೂ ನಾಮಕರಣಗೊಳಿಸುವರು ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.