ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸ್ಫರ್ಡ್ ಪಾಟೀಲ್ಸ್ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಅಖಿಲ ನದಾಫ ೬೨೫ ಅಂಕ ಪಡೆದು ರಾಜ್ಯಕ್ಕೆ ಮತ್ತು ಶಾಲೆಗೆ ಪ್ರಥಮ, ಮಲ್ಲನಗೌಡ ಬಿರಾದಾರ ೬೨೩ ಅಂಕ ಪಡೆದು ರಾಜ್ಯಕ್ಕೆ ತೃತೀಯ ಮತ್ತು ಶಾಲೆಗೆ ದ್ವಿತೀಯ, ಪ್ರಾರ್ಥನಾ ಕುಲಕರ್ಣಿ ೬೨೨ ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆಯ ಒಟ್ಟು ಫಲಿತಾಂಶ ಶೇ೯೯ ರಷ್ಟು ಆಗಿದ್ದು ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್.ಪಾಟೀಲ ಅಭಿನಂದಿಸಿದ್ದಾರೆ.
