ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪಗರಿ ಅವರ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ ಅವರ ಅನುಮೋದನೆ ಹಾಗೂ ಆದೇಶದ ಮೇರೆಗೆ ಪಟ್ಟಣದ ನಿವಾಸಿ ಸಮಾಜ ಸೇವಕ ಸಲೀಮ್ ಪಟೇಲ್ ಮರ್ತೂರ ಅವರನ್ನು ತಾಲೂಕ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಿಸಿ ಜಿಲ್ಲಾಧ್ಯಕ್ಷ ಶಕೀಲ್ ಅಹ್ಮದ ಬಾಗಮಾರೆ ಅವರು ಆದೇಶ ಹೊರಡಿಸಿದ್ದಾರೆ.
ಸಮಾಜಮುಖಿ ಕಾರ್ಯ, ಪಕ್ಷ ನಿಷ್ಠೆಯ ಕಾರ್ಯವನ್ನು ಗುರುತಿಸಿ ಸ್ಥಳೀಯ ಶಾಸಕ ಅಶೋಕ ಮನಗೂಳಿ ಅವರ ಆದೇಶದ ಮೇರೆಗೆ ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ತಾಲೂಕು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸಮಾಜದ ಹಿರಿಯ ಹಾಗೂ ಯುವಕರನ್ನು ಭೇಟಿ ನೀಡಿ ಪಕ್ಷದ ಹಾಗೂ ಸ್ಥಳೀಯ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಅವರಿಗೆ ತಿಳಿಸಿ ಪಕ್ಷದ ಜೊತೆಗೆ ಸಂಘಟನೆಯನ್ನು ಬೆಳೆಸುವ ಕಾರ್ಯ ನಿಮ್ಮಿಂದಾಗಬೇಕು ಎಂದು ತಿಳಿಸಿದ್ದಾರೆ. ತಾವುಗಳು ಹಾಗೂ ಸ್ಥಳೀಯ ಶಾಸಕರು ನನ್ನ ಮೇಲೆ ವಿಶ್ವಾಸವನ್ನಿಟ್ಟು ತಾವು ವಹಿಸಿದ ಜವಾಬ್ದಾರಯನ್ನು ಅಚ್ಚು ಕಟ್ಟಾಗಿ ನಿಭಾಯಿಸಿಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅಲ್ಪಸಂಖ್ಯಾತರ ಘಟಕದ ತಾಲೂಕ ನೂತನ ಅಧ್ಯಕ್ಷ ಸಲೀಮ್‌ಪಟೇಲ್ ಮರ್ತೂರ ತಿಳಿಸಿದ್ದಾರೆ.

