Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರದ್ಧೆ, ಭಕ್ತಿ, ಸಂಸ್ಕೃತಿ ನಿಸ್ವಾರ್ಥದಿಂದ ಮುಂದುವರೆಸುತ್ತಿರುವ ಹಾಲುಮತ ಸಮಾಜ
(ರಾಜ್ಯ ) ಜಿಲ್ಲೆ

ಶ್ರದ್ಧೆ, ಭಕ್ತಿ, ಸಂಸ್ಕೃತಿ ನಿಸ್ವಾರ್ಥದಿಂದ ಮುಂದುವರೆಸುತ್ತಿರುವ ಹಾಲುಮತ ಸಮಾಜ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹಾಲುಮತ ಸಮುದಾಯದವರು ತಮ್ಮ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಸಂಸ್ಕೃತಿಯನ್ನು ನಿಸ್ವಾರ್ಥವಾಗಿ ಮುಂದುವರೆಸುತ್ತಿರುವುದು ಹೆಮ್ಮೆಪಡುವ ವಿಷಯವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಗುರುವಾರ ಮುಸ್ಸಂಜೆ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಶ್ರೀ ನಗರ ಸಿದ್ಧೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ, ಕಳಸಾರೋಹಣ ಹಾಗೂ ಪ್ರಾಣ ಪ್ರತಿಷ್ಠಾಪನೆ, ಕುಂಭ ಮೇಳ, ಜಾತ್ರಾ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಬರಬೇಕು ಎಂಬುದು ಬಾಬಾನಗರದ ಜನತೆಯೆ ಒತ್ತಾಸೆಯಾಗಿತ್ತು. ಆದರೆ, ಪೂರ್ವನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಿಎಂ ಬರಲು ಆಗಿಲ್ಲ. ಆದರೆ, ಮುಂಬರುವ ದಿನಗಳಲ್ಲಿ ಸಿಎಂ ಅವರನ್ನು ಆಹ್ವಾನಿಸಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.
ಶ್ರೀ ನಗರ ಸಿದ್ಧೇಶ್ವರ ಪುರಾತನ ದೇವಸ್ಥಾನವನ್ನು ರೈತರು ದುಡಿದ ಹಣ ಕೂಡಿಸಿ ಅಭಿವೃದ್ಧಿ ಮಾಡಿದ್ದಾರೆ. ಮಖಣಾಪುರ, ಅಮೋಘಸಿದ್ಧ, ಬಾಬಾನಗರ ಸೇರಿದಂತೆ ಇನ್ನುಳಿದ ಪುಣ್ಯಕ್ಷೇತ್ರಗಳನ್ನು ಧಾರ್ಮಿಕ ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿ ಪಡಿಸಲಾಗುವುದು. ನಾವು ಭಂಡಾರದಲ್ಲಿ ಭಕ್ತಿಯನ್ನು ಕಾಣುತ್ತೇವೆ. ಭಗೀರಥನ ಆಶೀರ್ವಾದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪ್ರೇರಣೆ ಹಾಗೂ ಸಿಎಂ ಎಸ್. ಸಿದ್ಧರಾಮಯ್ಯ ಸಹಕಾರದಿಂದ ಈ ಭಾಗದಲ್ಲಿ ನೀರಾವರಿ ಮಾಡಿದ್ದರಿಂದ ದ್ರಾಕ್ಷಿ ನಾಡು ಬಾಬಾನಗರದ ರೈತರು ಈಗ ಕಬ್ಬನ್ನೂ ಬೆಳೆಯುತ್ತಿದ್ದಾರೆ. ಕೆರೆ, ಹಳ್ಳಗಳಿಗೆ ನೀರು ಹರಿಸಿದ ಪರಿಣಾಮ ಅಂತರ್ಜಲ ಹೆಚ್ಚಾಗಿದೆ. ಭೂಮಿಗೆ ಬಂಗಾರದ ಬೆಲೆ ಬಂದಿದ್ದು ಯಾರೂ ಮಾರಾಟ ಮಾಡಬೇಡಿ. ಹೆಣ್ಣು ಮಕ್ಕಳಿಗೂ ಸಮಾನ ಶಿಕ್ಷಣ ನೀಡಿ, ಅವರೂ ಸಮಾಜದಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡಲು ಸ್ಪೂರ್ತಿ ನೀಡಬೇಕು. ಬಸವಣ್ಣನವರು ಮತ್ತು ಸಿದ್ಧೇಶ್ವರ ಸ್ವಾಮೀಜಿಗಳ ಕನಸು ನನಸಾಗಲು ಎಲ್ಲರೂ ಆದರ್ಶವಾಗಿ ಬದುಕಬೇಕು. ಈ ಬಾರಿ ದೇವರ ಕೃಪೆಯಿಂದ ನಾಡಿನಾದ್ಯಂತ ಒಳ್ಳೆಯ ಮಳೆಯಾಗಿ ರೈತರು ಸಮೃದ್ಧ ಬೆಳೆ ಬೆಳೆದು ಆ ಬೆಳೆಗಳಿಗೆ ಬೆಲೆ ಸಿಗಲಿ ಎಂದು ಸಚಿವರು ಹೇಳಿದರು.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮಾತನಾಡಿ, ಎಂ. ಬಿ. ಪಾಟೀಲರ ಜೊತೆ ಸಿಎಂ ಎಸ್. ಸಿದ್ಧರಾಮಯ್ಯ ಇದ್ದಾರೆ. ಸಚಿವ ಎಂ. ಬಿ. ಪಾಟೀಲರು ಜಿಲ್ಲೆಯ ಜನರ ಜೀವನ ಬದಲಿಸಿದ್ದಾರೆ. ಅವರ ನೀರಾವರಿ ಕೆಲಸಗಳಿಂದ ಜನರಷ್ಟೇ ಅಲ್ಲ, ಪ್ರಾಣಿ, ಪಕ್ಷಿಗಳಿಗೂ ಉಪಯೋಗವಾಗಿದ್ದು, ಮೂಕಜೀವಿಗಳ ಆಶೀರ್ವಾದ ಸಚಿವರ ಮೇಲಿದೆ. ಮಹಿಳೆಯರು ಸಾಮಾಜಿಕ ಜಾಲತಾಣಗಳ ಬಗ್ಗೆ ಎಚ್ಚರದಿಂದಿರಬೇಕು. ಗೊತ್ತಿಲ್ಲದವರ ಸಂಗ ಮಾಡಬಾರದು. ರೀಲ್ಸ್ ಬದಲು ಓದಿನ ಕಡೆ ಗಮನ ಹರಿಸಿ. ಸಮುದಾಯದ ಎಲ್ಲರೂ ಓದಿ ಉನ್ನತ ಸ್ಥಾನ ಗಳಿಸಬೇಕು. ಅನ್ಯಾಯವಾದಾಗ ದನಿ ಎತ್ತಬೇಕು. ಹೆಣ್ಣು ಮಕ್ಕಳಿಗೆ ಆಸ್ತಿ, ಬಂಗಾರದ ಬದಲು ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿದರು.
ಮಖಣಾಪುರ ಸೋಮಲಿಂಗೇಶ್ವರ ಗುರುಪೀಠದ ಶ್ರೀ ಸೋಮೇಶ್ವರ ಮಹಾಸ್ವಾಮೀಗಳು ಮಾತನಾಡಿ, ಸಚಿವ ಎಂ. ಬಿ. ಪಾಟೀಲ ನಾಡಿನ ಹೆಮ್ಮೆಯ ಪುತ್ರರಾಗಿದ್ದು, ಎಲ್ಲ ಸಮುದಾಯದ ಹಿತ ಕಾಪಾಡುತ್ತಿದ್ದಾರೆ. ಪೂಜೆಗೆ ಕಬ್ಬು ಸಿಗದ ಮಖಣಾಪುರದಲ್ಲಿ ಇವರು ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಕೆರೆಗೆ ನೀರು ಬಂದು ಅಂತರ್ಜಲ ಹೆಚ್ಚಿದೆ. ವರ್ಷದಲ್ಲಿ ಆರು ತಿಂಗಳು ಕಾಲ ಕಬ್ಬು ಕಟಾವು ನಡೆಯುತ್ತಿದೆ. ಜನರ ಮೇಲೆ ಅವರ ಋಣವಿದೆ. ಅವರ ಉಪಕಾರ ಸ್ಮರಿಸಿ ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸರೂರಿನ ರೇವಣಸಿದ್ಧೇಶ್ವರ ಹಾಲುಮತ ಗುರುಪೀಠದ ಜಗದ್ಗುರು ಶ್ರೀ ಸಿದ್ದಯ್ಯ ಮಹಾಸ್ವಾಮಿಗಳು, ಶ್ರೀ ಮೃತ್ಯುಂಜಯ ಮಹಾಸ್ವಾಮಿಗಳು, ಕವಲಗುಡ್ಡದ ಸಿದ್ಧಯೋಗಿ ಅಮರೇಶ್ವರ ಮಹಾಸ್ವಾಮಿಗಳು, ಶ್ರೀ ನಗರಸಿದ್ದೇಶ್ವರ ಗದ್ದುಗೆ ಪೂಜಾರಿ ಶ್ರೀ ಹೊನ್ನಪ್ಪ ಶಿವರಾಯ ಪೂಜಾರಿ, ಚಿಕ್ಕಲಕಿಯ ಶ್ರೀ ಗುರುಮತ್ಯಾ, ಗದುಗಿನ ಚಿಕ್ಕನಂದಿಗೋಳ ಸಿದ್ದಾಶ್ರಮದ ಶ್ರೀ ಅಭಿನವ ವೀರೇಶ್ವರ ಗುರೂಜಿ, ಬಾಬಾನಗರ ಹಿರೇಮಠದ ಶ್ರೀ ರಾಚಯ್ಯ ಮಹಾಸ್ವಾಮಿಗಳು, ಬಳಬಟ್ಟಿ ಅಮಸಿದ್ಧ ಮಹಾರಾಜರು, ಮುಖಂಡರಾದ ಸಿದ್ದು ಗೌಡನವರ, ಈರನಗೌಡ ರುದ್ರಗೌಡರ, ಸೋಮನಾಥ ಬಾಗಲಕೋಟ, ಸೋಮನಾಥ ಕಳ್ಳಿಮನಿ, ಶಿಲ್ಪಾ ಕುದರಗೊಂಡ, ಬೀರಮಪ್ಪ ಜುಮನಾಳ, ತಾಸಗಾಂವ ಝಾನ್ಸಿ ಕೋಲ್ಡ್ ಸ್ಟೋರೇಜ್ ನ ಪಂಜಾಬರಾವ ಬಾಬುರಾವ ಮಾನೆ ಪಾಟೀಲ ಮತ್ತು ಬಾಬಾನಗರ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

“ಸಚಿವ ಎಂ. ಬಿ. ಪಾಟೀಲರು ಕೇವಲ ನೀರಾವರಿ ಮಾತ್ರವಲ್ಲ, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸಿ.ಎಸ್.ಆರ್ ಅನುದಾನ ನೀಡಿ ಈ ಭಾಗದಲ್ಲಿ ನೀರು, ಶಿಕ್ಷಣ, ಉದ್ಯೋಗಕ್ಕಾಗಿ ಕ್ರಮ ಕೈಗೊಂಡಿದ್ದಾರೆ.”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.