ವಿಜಯಪುರ: ಅಕ್ರಮ ಮರಳುಗಾರಿಕೆಯ ಪಾಲುದಾರಿಕೆಯಲ್ಲಿ ತಮ್ಮ ಇಲಾಖೆ ಅಧಿಕಾರಿಗಳು ಭಾಗವಹಿಸದಂತೆ ಸೂಕ್ತ ಕಾನೂನು ಕ್ರಮ ವಹಿಸುವಂತೆ ಆಗ್ರಹಿಸಿ ಕೆ.ಆರ್.ಎಸ್. ಪಾರ್ಟಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ರಾಜ್ಯ ಸಂಘಟನಾ ಕಾರ್ಯದರ್ಶಿ. ಶಿವಾನಂದ ಯಡಹಳ್ಳಿ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರೂ ಪ್ರರೋಜನವಾಗಿಲ್ಲ. ಸಾರ್ವಜನಿಕ ರಂಗದಲ್ಲಿ ತೀವ್ರ ಪ್ರಮಾಣದಲ್ಲಿ ಚರ್ಚೆಗೆ ಒಳಗಾಗುತ್ತಿರುವ ಪ್ರಮುಖ ವಿಷಯವೇನೆಂದರೆ, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿ ಠಾಣೆಯಲ್ಲಿ ೨೫% ರಷ್ಟು ಪೊಲೀಸ್ ಸಿಬ್ಬಂದಿಗಳು ಸ್ವಂತ ವಾಹನಗಳನ್ನು ಇಟ್ಟುಕೊಂಡು ಮರಳುಗಾರಿಕೆ ದಂಧೆ ಮಾಡುತ್ತಿರುವುದು ಕಂಡುಬಂದಿದೆ ಕಳೆದ ಐದು ದಿನಗಳ ಹಿಂದೆ ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಮರಳು ಗಾಡಿಯನ್ನು ವಶಕ್ಕೆ ಪಡೆಯಲಾಗಿದೆ ಅದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಯ ಗಾಡಿಯು ಇದೆ ಎಂದು ಸಾರ್ವಜನಿಕರು ತಿಳಿಸಿರುತ್ತಾರೆ. ಜಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳನ್ನು ಸಾಗಿಸುವಾಗ ವಶಕ್ಕೆ ಪಡೆದಿರುವ ನಾಲ್ಕು ವಾಹನಗಳ ಮೇಲೆ ಎಫ್.ಐ.ಆರ್. ದಾಖಲಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಮರಳುಗಾರಿಕೆಗೆ ಕಡಿವಾಣ ಹಾಕಲು ಈ ಮೂಲಕ ಕೋರಿಕೊಳ್ಳುತ್ತೇವೆ.ಕಾನೂನು ಪಾಲಕರೆ ಕಾನೂನು ಉಲ್ಲಂಘನೆಗೆ ಮುಂದಾದರೆ ಸಾರ್ವಜನಿಕ ರಂಗದಲ್ಲಿ ಪೊಲೀಸ್ ಇಲಾಖೆಯ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ ಆದ್ದರಿಂದ ಎಲ್ಲಾ ಪೊಲೀಸ್ ಠಾಣಾ ಸಿಬ್ಬಂದಿಗಳಿಗೆ ಕಟ್ಟುನಿದ್ದಾಗಿ ಅಕ್ರಮ ಮರಳುಗಾರಿಕೆಗೆ ಸಹಕರಿಸಕೂಡದು ಮತ್ತು ತಮ್ಮ ವಾಹನ ಮೂಲಕ ಅಕ್ರಮ ಮರಳುಗಾರಿಕೆ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಹಮೀದ ಇನಾಮದಾರ, ರಾಕೇಶ್ ಇಂಗಳಗಿ, ಪ್ರವೀಣ್ ಕನಸೆ, ಮೈಬೂಬ್ ತಾಂಬೋಳಿ ರಾಘವೇಂದ್ರ ಚಲವಾದಿ, ಮಾಂತೇಶ್ ಮರ್ನೂರ್ ಇದ್ದರು.
Subscribe to Updates
Get the latest creative news from FooBar about art, design and business.
ಅಕ್ರಮ ಮರಳುಗಾರಿಕೆಯಲ್ಲಿ ಆರಕ್ಷಕರು :ಕ್ರಮಕ್ಕೆ ಕೆಆರೆಸ್ ಆಗ್ರಹ
Related Posts
Add A Comment

