ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ಶಲ್ಯತಂತ್ರ ವಿಭಾಗದ ವತಿಯಿಂದ ಮೇ 5 ರಿಂದ ಮೇ 10ರ ವರೆಗೆ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಉಚಿತ ತಪಾಸಣೆ ಮತ್ತು ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೋಬೈಲ್ ಸಂಖ್ಯೆ: 7019656245 ಸಂಪರ್ಕಿಸಬಹುದಾಗಿದೆ.
