Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಡಿವ ನೀರಿನ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ
(ರಾಜ್ಯ ) ಜಿಲ್ಲೆ

ಕುಡಿವ ನೀರಿನ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿ.ಪಂ ಸಿಇಓ ರಿಷಿ ಆನಂದ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಗ್ರಾಮ ಹಾಗೂ ವಸತಿಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಹಿಸುವ ಮೂಲಕ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು, ನಗರದ ಜಿಲ್ಲಾ ಪಂಚಾಯತಿಯ ಸಭಾಭವನದಲ್ಲಿ ಶನಿವಾರ ಜಲಧಾರೆ ಮತ್ತು ಜಲ ಜೀವನ ಮಿಷನ್ ಯೋಜನೆಗಳ ಕುರಿತು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಎಲ್ಲ ಉಪ-ವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಶಾಖಾಧಿಕಾರಿಗಳು ಹಾಗೂ ಜಲಧಾರೆ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರು ಮತ್ತು ಯೋಜನಾ ನಿರ್ವಹಣೆ ಸಮಾಲೋಚಕರೊಂದಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ನಿಯತವಾಗಿ ಹಾಗೂ ನಿರಂತರವಾಗಿ ಸಭೆಗಳನ್ನು ನಡೆಸುವ ಮೂಲಕ ನಿಗಾವಹಿಸಿ, ನಿಮ್ಮ ಹಂತದಲ್ಲೇ ಪರಿಹಾರ ಕ್ರಮಗಳನ್ನು ತೆಗೆದುಕೊಂಡು ದೂರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದ ಅವರು, ಕುಡಿಯುವ ನೀರಿನ ಸಮಸ್ಯೆಯಾಗಬಹುದಾದ ಜನವಸತಿಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ತೀವ್ರ ನಿಗಾವಹಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಒಟ್ಟು ೪೦ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿದ್ದು, ಇವುಗಳಲ್ಲಿ ೨೩ ಯೋಜನೆಗಳು ಕೃಷ್ಣಾ ಹಾಗೂ ಭೀಮಾ ನದಿಯ ನೀರನ್ನು ಪರಿಗಣಿಸಿ ರೂಪಿಸಿಕೊಳ್ಳಲಾಗಿದೆ. ೧೭ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳು ಆಲಮಟ್ಟಿ ಹಾಗೂ ನಾರಾಯಣಪೂರ ಜಲಾಶಯಗಳಡಿಯ ಕಾಲುವೆ ಆಧಾರಿತವಾಗಿರುತ್ತವೆ.
ದಿನಾಂಕ: ೦೪.೦೫.೨೦೨೫ ರಿಂದ ನಾರಾಯಣಪೂರ ಜಲಾಶಯದ ಮೂಲಕ ೧.೫೦ ಟಿ.ಎಂ.ಸಿ ನೀರನ್ನು ಕಾಲುವೆ ಆಧಾರಿತ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿಗೆ ಹರಿಸಲಾಗುತ್ತಿದ್ದು, ನೀರು ಸಂಗ್ರಹಿಸಿಟ್ಟುಕೊಳ್ಳಬೇಕು. ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿ ಜನ-ಜಾನುವಾರುಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವುದಕ್ಕೆ ಪೂರಕವಾಗಿ ಯೋಜನೆ ರೂಪಿಸಿಕೊಂಡು ನಿರ್ವಹಣೆ ಮಾಡಬೇಕು ಎಂದು ಸಭೆಯಲ್ಲಿನ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಬಿ. ಎಸ್. ಕುಂಬಾರ, ಜಿಲ್ಲೆಯ ಎಲ್ಲ ಉಪ-ವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಶಾಖಾಧಿಕಾರಿಗಳು ಹಾಗೂ ಜಲಧಾರೆ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರು ಮತ್ತು ಯೋಜನಾ ನಿರ್ವಹಣೆ ಸಮಾಲೋಚಕರು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.