ವಿಜಯಪುರ: ಅಕ್ಟೋಬರ್ ೨ ರಂದು ಮಹಾತ್ಮ ಗಾಂಧಿ ಜಯಂತಿ ಆಚರಣೆ ಹಿನ್ನಲೆಯಲ್ಲಿ ಅಂದು ರಾಜ್ಯದಾದ್ಯಂತ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದ್ದು, ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮಾಡುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ಅ.೧ರ ಸಂಜೆ ೬ ಗಂಟೆಯಿಂದ ಅಕ್ಟೋಬರ್ ೨ರ ಮಧ್ಯರಾತ್ರಿಯವರೆಗೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಅದ್ಯಾಗ್ಯೂ ಸದರಿ ದಿನದಂದು ಆದೇಶವನ್ನು ಉಲ್ಲಂಘಿಸಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ದ ದಂಡ ಅಥವಾ ಜುಲ್ಮಾನೆ ಅಥವಾ ದಂಡ ಮತ್ತು ಜುಲ್ಮಾನೆಯೊಂದಿಗೆ ಮಳಿಗೆಯನ್ನು ಬೀಗಮುದ್ರೆ ಹಾಕಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment