ಉದಯರಶ್ಮಿ ದಿನಪತ್ರಿಕೆ
ಇಂಡಿ: ಬಡ ಜನರಿಗೆ ಪೂರೈಸಿದ ಅನ್ನಭಾಗ್ಯ ಅಕ್ಕಿಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 40890 ರೂಪಾಯಿ ಮೌಲ್ಯದ 28 ಅಕ್ಕಿ ತುಂಬಿದ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಡಿಮೆ ದರದಲ್ಲಿ ಅಕ್ಕಿ ಖರೀದಿಸಿ, ಅವುಗಳನ್ನು ಒಂದೆಡೆ ಸಂಗ್ರಹಿಸಿ ತದನಂತರ ಬಹಳಷ್ಟು ಚೀಲ ತುಂಬಿದ ಮೇಲೆ ಬೇರೆ ಕಡೆಗೆ ಸಾಗಾಟ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಸೂಮ್ ಸಲೀಂ ಅರಬ್, ಹಾಗೂ ಸದ್ದಾಂ ಮತಾಬ್ ಬಾಗವಾನ್ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಗೂ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಇದ್ದರು