ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿನ ೨೦೨೧-೨೨ನೇ ಅವಧಿಯ ಖಾಲಿ ಇರುವ ಉತ್ನಾಳ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕಲಬುರಗಿಯ ಕರ್ನಾಟಕ ಉಚ್ಛ ನ್ಯಾಯಾಲಯ ಇವರ ರಿಟ್ ಅಪೀಲು ಆದೇಶದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ದಿನಾಂಕ:೧೫-೦೫-೨೦೨೫ರೊಳಗಾಗಿ ಸಂಬಂಧಿಸಿದ ವಿಜಯಪುರ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.