Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಮಿಳುನಾಡಿನ ಏಜೆಂಟರಂತೆ ಸಿಎಂ-ಡಿಸಿಎಂ ವರ್ತನೆ :ಬಿಎಸ್ ವೈ ಆರೋಪ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ತಮಿಳುನಾಡು ಏಜೆಂಟರಂತೆ ವರ್ತಿಸಬಾರದು ಎಂಬುದು ನಮ್ಮ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ತಿಳಿದಿರಬೇಕು. ವಾಸ್ತವ ಸಂಗತಿಗಳನ್ನು ಅರಿತುಕೊಳ್ಳಬೇಕು. ನಮ್ಮ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ನೀರಿಲ್ಲ ಮತ್ತು ಕುಡಿಯುವ ಉದ್ದೇಶಕ್ಕೂ ಇರುವ ನೀರು ನಮಗೆ ಸಾಕಾಗುತ್ತಿಲ್ಲ. ಪ್ರಧಾನಿ ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ಅವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಮತ್ತು ಜನಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಮಿಳುನಾಡಿನ ಏಜೆಂಟರಂತೆ ವರ್ತಿಸುತ್ತಿರುವುದರಿಂದ ಕರ್ನಾಟಕವು ಬಿಕ್ಕಟ್ಟು ಎದುರಿಸುತ್ತಿದೆ ಎಂದು ದೂರಿದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ, ‘ರಾಜ್ಯ ಸರ್ಕಾರ ರೈತರ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ. ಅವರು ಈಗ ರಾಜ್ಯದ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಅದಕ್ಕಾಗಿಯೇ ಜೆಡಿಎಸ್ ಮತ್ತು ಬಿಜೆಪಿ ಪ್ರತಿಭಟನೆ ನಡೆಸುತ್ತಿವೆ’ ಎಂದರು.
ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಯಡಿಯೂರಪ್ಪ ಮಾತನಾಡಿ, ‘ಈಗಿನ ಕಾಂಗ್ರೆಸ್ ಸರ್ಕಾರ ಕಾವೇರಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ರೈತರು ಅಕ್ಷರಶಃ ಬೀದಿ ಪಾಲಾಗಿದ್ದಾರೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಹರಿಯುತ್ತಲೇ ಇದೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ವಿಷಯದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಏಕೆಂದರೆ, ಇದು ನಿಮ್ಮ (ಈಗಿನ ಕಾಂಗ್ರೆಸ್ ಸರ್ಕಾರದ) ವೈಫಲ್ಯ’ ಎಂದರು.

ಸರ್ಕಾರ ಸಮರ್ಥವಾಗಿದೆ :ಪರಮೇಶ್ವರ

ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಅವರು, ರಾಜ್ಯ ಸರ್ಕಾರವು ಸಮಸ್ಯೆಯನ್ನು ನಿಭಾಯಿಸಲು ಸಮರ್ಥವಾಗಿದೆ. ಸರ್ಕಾರವಾಗಿ ನಮಗೆ ಕೆಲವು ಜವಾಬ್ದಾರಿಗಳಿವೆ. ಕಾವೇರಿ ವಿಚಾರದಲ್ಲಿ ಅವರು ರಾಜಕೀಯ ಮಾಡಲಿ, ಸರ್ಕಾರ ನಮ್ಮ ರೈತರನ್ನು ನೋಡಿಕೊಳ್ಳುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
‘ಕಾವೇರಿ ನೀರು ನಿಯಂತ್ರಣ ಸಮಿತಿಯು (ಸಿಡಬ್ಲ್ಯುಆರ್‌ಸಿ) ಅಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು ಬಿಡಲು ಆದೇಶಿಸಿದೆ. ನಾನು ಈಗಾಗಲೇ ನಮ್ಮ ವಕೀಲರೊಂದಿಗೆ ಮಾತನಾಡಿದ್ದೇನೆ. ಅವರು ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಮಗೆ ಸೂಚಿಸಿದ್ದಾರೆ. ನಾವು ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ತಮಿಳುನಾಡಿಗೆ ನೀರು ಬಿಡಲು ನಮಗೇ ನೀರಿಲ್ಲ’ ಎಂದು ಹೇಳಿದರು

BIJAPUR NEWS patil public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.