ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ನಗರದ ಆದರ್ಶವಿದ್ಯಾಲಯದ 7, 8 ಹಾಗೂ 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿ ದೆ. ಖಾಲಿ ಇರುವ ಸ್ಥಾನಗಳಿಗಾಗಿ ಅರ್ಜಿ ಕರೆಯಲಾಗಿ ದ್ದು, ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಜೂ.26 ರಿಂದ ಜುಲೈ 7 ರವರೆಗೆ ಆದರ್ಶ ವಿದ್ಯಾಲಯದ ಆರ್ಎಂಎಸ್ಎ ಆಲಗೂರು ಆರ್ಸಿ ಶಾಲೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಗಳು ಆ.16ರಂದು ಬುಧವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು, ವಿದ್ಯಾಲಯದಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದು, ಮೀಸಲಾತಿಯ ವಿವರವನ್ನು ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು
7411672048/9916006936 ಸಂಪರ್ಕಿಸಬಹುದು ಎಂದು ಮುಖ್ಯಶಿಕ್ಷಕರು ತಿಳಿಸಿದ್ದಾರೆ.