Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
(ರಾಜ್ಯ ) ಜಿಲ್ಲೆ

ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳು, ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಡಾ.ಎಂ.ಬಿ.ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರ ಜಾರಿಗೆ ತಂದಿರುವ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಜನರಿಗೆ ಬಹುಪಯೋಗಿಯಾಗಿದ್ದು, ಅವರ ಆರ್ಥಿಕ ಜೀವನ ಮಟ್ಟ ಹೆಚ್ಚಾಗುವುದರ ಜೊತೆಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಈ ಯೋಜನೆಗಳು ಸಹಕಾರಿಯಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.
ಶನಿವಾರ ೨೦೨೩-೨೪ನೇ ಸಾಲಿನ ಹಾಗೂ ೨೦೨೪-೨೫ನೇ ಸಾಲಿನ ಬಬಲೇಶ್ವರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲೂಕಿನಲ್ಲಿ ನಿರ್ಮಿಸಲಾದ ಕಟ್ಟಡ ಕಾಮಗಾರಿಗಳು ಹಾಗೂ ಭೂಮಿ ಪೂಜಾ ಸಮಾರಂಭ ವಿವಿಧ ಕಾಮಗಾರಿಗಳಾದ ೨೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಸಂಖ್ಯೆ-೪ರ ಉದ್ಘಾಟನೆ, ೨೫ ಲಕ್ಷ ರೂ ವೆಚ್ಚದ ರೈತ ಸಂಪರ್ಕ ಕೇಂದ್ರ ಗೋದಾಮು ಉದ್ಘಾಟನೆ, ೧೫ ಲಕ್ಷ ರೂ. ವೆಚ್ಚದಡಿಯ ಅಂಗನವಾಡಿ ಕಟ್ಟಡ ಸಂಖ್ಯೆ ೦೪ರ ಭೂಮಿ ಪೂಜೆ ಹಾಗೂ ತಿಕೋಟಾದ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಈ ಭಾಗದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ತಿಕೋಟಾ ತಾಲೂಕಾಗಿ ಹಾಗೂ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಹಿನ್ನೆಲೆಯಲ್ಲಿ ಜನರ ಬೇಡಿಕೆಗೆ ಸ್ಪಂದಿಸಿ, ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ. ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳಿಂದ ಈ ಭಾಗದಲ್ಲಿ ಸಮೃದಿ ನೆಲೆಸಿದೆ. ನೀರಾವರಿ ಯೋಜನೆಗಳಿಂದ ಈ ಭಾಗದ ರೈತರು ತಮ್ಮ ಬದುಕು ಹಸನ ಮಾಡಿಕೊಂಡು, ಆರ್ಥಿಕ ಮಟ್ಟ ಉತ್ತಮಪಡಿಸಿಕೊಂಡಿದ್ದಾರೆ ಎಂದು ಹೇಳಿದರು.
ಬಬಲೇಶ್ವರ ತಿಕೋಟಾವನ್ನು ರಾಜ್ಯದಲ್ಲಿಯೇ ಮಾದರಿಯಾಗಿಸುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳು, ಈ ಭಾಗದ ರಸ್ತೆ ಅಭಿವೃದ್ಧಿ, ವಿದ್ಯುತ್ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಅವಶ್ಯಕತೆಗಳಿಗೆ ಆದ್ಯತೆ ನೀಡಿ ಅಭಿವೃದ್ಧಿ ಕಾರ್ಯ ಕೈಗೊಂಡಿರುವ ತೃಪ್ತಿ ಇದೆ ಎಂದು ಹೇಳಿದರು.
ರೈತ ಸಂಪರ್ಕ ಕೇಂದ್ರ ಗೋದಾಮು ಉದ್ಘಾಟನೆ: ತಿಕೋಟಾ ತಾಲೂಕಿನ ರೈತರ ಪಾಲಿಗೆ ಇಂದು ಮತ್ತೊಂದು ಮಹತ್ವದ ದಿನ. ನೂತನ ರೈತ ಸಂಪರ್ಕ, ಗೋದಾಮು ಕೇಂದ್ರವನ್ನು ಲೋಕಾರ್ಪಣೆ ಗೊಳಿಸಿರುವೆ. ರೈತರು ತಾವು ಬೆಳೆಯುವ ಬೆಳೆಗಳಾದ ಹಣ್ಣು, ತರಕಾರಿ, ಧಾನ್ಯ ಇತ್ಯಾದಿಗಳನ್ನು ಈ ಗೋದಾಮಿನಲ್ಲಿ ಭದ್ರವಾಗಿ ಸಂಗ್ರಹಿಸಿಕೊಳ್ಳಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಗುರು ದಾಸ್ಯಾಳ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ತಿಕೋಟಾದ ತಹಶೀಲ್ದಾರ ಸುರೇಶ ಚವಲರ್, ತಾಲೂಕು ಪಂಚಾಯತಿಯ ಕಾರ್ಯ ನಿರ್ವಹಣಾಧಿಕಾರಿ ಬಸವಂತರಾಯಗೌಡ ಬಿರಾದರ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಘು ನಡುವಿನಮನಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಪೋಷಕರು ಹಾಗೂ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.

“ರೈತರ ಉಪಯೋಗಕ್ಕಾಗಿ ರೈತ ಸಂಪರ್ಕ ಕೇಂದ್ರ ಹಾಗೂ ಗೋದಾಮು ಉದ್ಘಾಟಿಸಿದ್ದು, ಇದರಿಂದ ರೈತರಿಗೆ ಅನುಕೂಲ ದೊರೆಯಲಿದೆ. ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಮಹಿಳೆಯರ ಹಾಗೂ ಮಕ್ಕಳ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ವಿತರಣೆ, ಆರೋಗ್ಯ ತಪಾಸಣೆ ಸಹ ಕೈಗೊಳ್ಳಲಾಗುತ್ತಿದ್ದು, ಸರ್ಕಾರದ ಸೌಲಭ್ಯವನ್ನು ಸಾರ್ವಜನಿಕರು ಉಪಯೋಗಿಸಿಕೊಳ್ಳಬೇಕು.”

– ರಿಷಿ ಆನಂದ
ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.