ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿಯ ಸರ್ಕಾರಿ ಆದರ್ಶ ವಿದ್ಯಾಲಯದ 2025 -26 ನೇ ಸಾಲಿನ 7,8, 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ತರಗತಿವಾರು ಮತ್ತು ಮೀಸಲಾತಿವಾರು ಅರ್ಜಿಯನ್ನು ದಿನಾಂಕ 03.07.2025 ರಿಂದ ಶಾಲೆಯಲ್ಲಿ ವಿತರಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು, ಪಾಲಕರು, ಖುದ್ದಾಗಿ ಶಾಲೆಗೆ ಭೇಟಿ ನೀಡಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಜು10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮೊ: 9945614301 ಗೆ ಸಂಪರ್ಕಿಸಬಹುದು.
