ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯ ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಶಾರದಳ್ಳಿ ಮತ್ತು ವಿಕ್ರಾಂತ ಶಾರದಳ್ಳಿ ಬೆಳ್ಳಿ ಮತ್ತು ಕಂಚಿನ ಪದಕ ಗಳಿಸಿ ಸಾಧನೆಗೈದಿದ್ದಾರೆ.
ಕೊಪ್ಪಳ ಜಿಲ್ಲೆಯ ಹನುಮಸಾಗರದ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ನಡೆದ 11 ನೇ ರಾಜ್ಯ ಪೆಂಕಾಕ್ ಸಿಲಾಸ್
ಕ್ರೀಡಾಕೂಟದಲ್ಲಿ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ ಶಾಲೆಯ ಹಾಗೂ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ತರಬೇತಿದಾರ ಶಿವಕುಮಾರ ಶಾರದಳ್ಳಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಟೂರ್ನಿಯ ಆಯೋಜಕರು ಐಪಿಎಸ್ ಎಫ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ , ಐಪಿಎಸ್ ಎಫ್ ಉಪಾಧ್ಯಕ್ಷ ವಿಜಯ ಹಂಚನಾಳ ಸೇರಿ ಟೂರ್ನಿಯಲ್ಲಿ ಉಪಸ್ಥಿತರಿದ್ದ ಮುಖಂಡರ ಸಮ್ಮುಖದಲ್ಲಿ ವಿಜೇತ ಕ್ರೀಡಾ ಪಟುಗಳಿಗೆ ಮೆಡಲ್ ಹಾಗೂ ಪ್ರಮಾಣ ಪತ್ರ ವಿತರಿಸಿ ಶುಭಹಾರೈಸಿದರು.
ಟೂರ್ನಿಯಲ್ಲಿ ಪದಕ ವಿಜೇತರಾಗಿರುವ ಶಕುಂತಲಾ ಹಾಗೂ ವಿಕ್ರಾಂತನ ಸಾಧನೆಗೆ ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಅಧ್ಯಕ್ಷ
ಮಾಂತಗೌಡ ಬಿರಾದಾರ, ಪ್ರಾಚಾರ್ಯ ಸುಪರ್ಣದಾಸ್ , ಕಾರ್ಯದರ್ಶಿಯವರಾದ ಆದಮ್ಮ ಬಿರಾದಾರ, ಬಿಎಎಸ್ ಟ್ರಸ್ಟ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಹಾಗೂ ಆಡಳಿತ ಮಂಡಳಿಯವರು,
ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.

