Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ಧಿಯಿಂದ ವಿಜಯಪುರದ ಆಸ್ತಿಗಳ ಮೌಲ್ಯ ಹೆಚ್ಚಳ
(ರಾಜ್ಯ ) ಜಿಲ್ಲೆ

ಅಭಿವೃದ್ಧಿಯಿಂದ ವಿಜಯಪುರದ ಆಸ್ತಿಗಳ ಮೌಲ್ಯ ಹೆಚ್ಚಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.10 ಕೋಟಿ ಕಾಮಗಾರಿಗೆ ಭೂಮಿಪೂಜೆ | ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಕಳೆದ ಏಳು ವರ್ಷಗಳಲ್ಲಿ ಗುಣಮಟ್ಟದ ರಸ್ತೆಗಳು, ಚರಂಡಿ ನಿರ್ಮಾಣ, ಕಸ ವಿಲೇವಾರಿ ಹೀಗೆ ಪ್ರತಿಯೊಂದರಲ್ಲಿಯೂ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಗರದ ಸೌಂದರ್ಯಕರಣದ ಜೊತೆಗೆ ಆಸ್ತಿಗಳ ಮೌಲ್ಯ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಏಕತಾ ನಗರದ ಶ್ರೀ ಸಿದ್ದಿ ವಿನಾಯಕ ದೇವಸ್ಥಾನ ಹತ್ತಿರ ಭಾನುವಾರ ನಗರ ಮತಕ್ಷೇತ್ರದ ವ್ಯಾಪ್ತಿಯ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಬರುವ ನವರಸಪುರದ ವಿವಿಧ ಕಾಲೊನಿಗಳಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ ಮಂಜೂರಿಸಿದ ರೂ.10 ಕೋಟಿ ಅನುದಾನದಲ್ಲಿ ಆಂತರಿಕ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಗರದಲ್ಲಿ ಅಮಾಯಕರ ಆಸ್ತಿಗಳನ್ನು ಕಬಳಿಸುವ ಲಪುಟರಿದ್ದಾರೆ. ತಮ್ಮ ಉತಾರೆಗಳನ್ನು ಆಗಾಗ ಪರಿಶೀಲಿಸಿ, ಆನಲೈನ್ ದಲ್ಲೂ ನೋಡಲು ಅವಕಾಶವಿದೆ. ಅಲ್ಲದೆ, ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟ ಜಾಗೆಗಳನ್ನು ಸಹ ಪುಡಾರಿಗಳು ಕಬಳಿಸಲು ಯತ್ನಿಸುತ್ತಿದ್ದು, ತಮ್ಮ ಗಮನಕ್ಕೆ ಬಂದ ತಕ್ಷಣ ಶಾಸಕರ ಕಚೇರಿಗೆ ತಿಳಿಸಿ, ಕ್ರಮ ಕೈಗೊಳ್ಳಲಾಗುವುದು. ವಿಜಯಪುರ ನಗರದಲ್ಲಿ ನಾವು ಆರಂಭಿಸಿದ ವಕ್ಫ್ ವಿರುದ್ಧ ಹೋರಾಟ ಇಡೀ ದೇಶಕ್ಕೆ ಮುನ್ನುಡಿ ಆಯಿತು. ಇದರಿಂದ ಅಮಾಯಕರ, ಮಠ ಮಾನ್ಯಗಳ ಮತ್ತು ಸರ್ಕಾರಿ ಆಸ್ತಿಗಳನ್ನು ಉಳಿಸಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.
ನಗರದಲ್ಲಿ ಎಲ್ಲ ಬಡಾವಣೆ/ಕಾಲೊನಿಗಳಲ್ಲಿ ಹಂತ ಹಂತವಾಗಿ ರಸ್ತೆ, ಚರಂಡಿ ಅಭಿವೃದ್ಧಿ ಪಡಿಸಲಾಗಿದೆ. ಅಲ್ಪಸ್ವಲ್ಪ ಕಡೆ ಉಳಿದುಕೊಂಡಿದ್ದರೆ ಗಮನಕ್ಕೆ ತನ್ನಿ ಅಲ್ಲಿಯೂ ಮಾಡಿ ಮುಗಿಸಲಾಗುವುದು. ಅದೇ ರೀತಿ ಎಲ್ಲಿಯೂ ನೀರಿನ ಕೊರತೆ ಆಗದಂತೆ, ಎಲ್ಲಾ ಪ್ರದೇಶಗಳಿಗೂ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ಕುಡಿಯುವ ನೀರಿನ ಯೋಜನೆ ಹಂತ-3ರ ಮಂಜೂರಾತಿಗಾಗಿ ಸರ್ಕಾರಕ್ಕೆ ರೂ.750 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆ ಅನುಷ್ಠಾನಗೊಂಡರೆ, ಕಟ್ಟ ಕಡೆಯ ಮನೆಗಳಿಗೂ ಸಮರ್ಪಕವಾಗಿ ನೀರು ಬರಲಿದೆ ಎಂದರು.
ಗ್ರಾಮ ಪಂಚಾಯಿ ಅಧ್ಯಕ್ಷ ಸುರೇಶ ಗಚ್ಚಿನಮನಿ, ಮುಖಂಡರಾದ ಎಸ್.ಎಲ್.ಇಂಗಳೇಶ್ವರ ದಾದಾಸಾಹೇಬ ಬಾಗಾಯತ, ಅನೀಲ ಪತ್ತೇಪೂರ, ವಿಠ್ಠಲ ಜರತಾಪ, ಬಿ.ಡಿ.ಕಡಕೋಳ, ಸುನೀಲ ಚವ್ಹಾಣ, ಶ್ರೀರಾಮ ದೇಶಪಾಂಡೆ, ಸಂತೋಷ ಪಾಟೀಲ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.