ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಇಗ್ನೋ )ದಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಪದವಿ, ಸ್ನಾತಕೋತ್ತರ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶ ಆರಂಭವಾಗಿದ್ದು ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ನಗರದ ರಾಮಮಂದಿರ ರಸ್ತೆಯ ಬಿ.ಎಲ್. ಡಿ.ಇ.ಸಂಸ್ಥೆಯ ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿರುವ ಇಗ್ನೋ ಅಧ್ಯಯನ ಕೇಂದ್ರ 1307 ರಲ್ಲಿ ಸಂಪರ್ಕಿಸಬಹುದಾಗಿದೆ.
ಅಲ್ಲದೆ ಆನಲೈನ್ ಮೂಲಕ www.ignouadmission.samarth.edu.in ಕ್ಕೆ ಲಾಗಿನ್ ಆಗಿ ನೊಂದಣಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ನಂ. 9980691291 ಗೆ ಸಂಪರ್ಕಿಸಬಹುದು ಎಂದು ಇಗ್ನೋ ಕೇಂದ್ರದ ಸಂಯೋಜಕ ಡಾ. ಮಂಜುನಾಥ ಕೋರಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
