Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಣಮಟ್ಟದ ಶಿಕ್ಷಣ ನೀಡಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಗುಣಮಟ್ಟದ ಶಿಕ್ಷಣ ನೀಡಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸುವ ಮೂಲಕ ಅಗತ್ಯ ಕ್ರಮ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ, ಉತ್ತಮ ಫಲಿತಾಂಶಕ್ಕಾಗಿ ಸೂಕ್ಷ್ಮ ಯೋಜನೆಗಳನ್ನು ರೂಪಿಸಿ, ಆ ಯೋಜನೆಯ ಅನುಗುಣವಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸೂಚಿಸಿದರು.
ಅನುದಾನಿತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಸಾರವಾಗಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳವಂತೆ ಸಂಸ್ಥೆಗಳಿಗೆ ಸೂಚಿಸಬೇಕು ಹಾಗೂ ಫಲಿತಾಂಶ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಥಮಿಕ ಶಾಲಾ ಹಂತದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಪ್ರೋತ್ಸಾಹಿಸಿ, ಪ್ರಾಥಮಿಕ ಹಂತದಲ್ಲೇ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಿದಲ್ಲಿ ಪ್ರೌಢಶಾಲೆ ಹಾಗೂ ಪದವಿ ಪೂರ್ವಗಳ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶಗಳನ್ನು ಉತ್ತಮಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ಕೆಸ್ವಾನ್ ಸಂಪರ್ಕ ಹೊಂದಿದ್ದಲ್ಲಿ ಇ-ಆಫೀಸ್ ಅನುಷ್ಟಾನಗೊಳಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಉತ್ತಮ ಫಲಿತಾಂಶಕ್ಕಾಗಿ ರೂಪಿಸಿರುವ ಯೋಜನೆಗಳ ಕುರಿತು ಹಾಗೂ ಪ್ರತಿ ವಾರ ಶಿಕ್ಷಣದ ಅಭಿವೃದ್ದಿ ಬಗ್ಗೆ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ವಿಜಯ ಕುಮಾರ್ ಆಜೂರ್, ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಸಂಪತ್ ಗುಣಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಪಿ.ಎಸ್.ಕೋಲಾರ, ಎಲ್ಲ ತಾಲೂಕಿನ ಬಿ.ಇ.ಒ, ಸಿ.ಆರ್.ಪಿ, ಡಿ.ಆರ್.ಪಿ, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಅವರು ಮಂಗಳವಾರ ಜಿಲ್ಲಾ ಪಂಚಾಯತಿಯ ಮಿನಿ ಸಭಾ ಭವನದಲ್ಲಿ ವಿವಿಧ ಇಲಾಖೆಯ ಯೋಜನಾ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲ ಇಲಾಖೆಗಳು ತಮ್ಮ ಇಲಾಖಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ, ನಿಗದಿ ಪಡಿಸಿದ ಗುರಿ ಸಾಧನೆ ಹಾಗೂ ಜಿಲ್ಲೆಯ ಆಸ್ಪತ್ರೆ ಹಾಗೂ ಶಾಲೆಗಳ ದುರಸ್ತಿಗಳ ಪಟ್ಟಿ ಸಿದ್ಧಪಡಿಸಿ ಪತ್ರ ಬರೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ವಸತಿ ನಿಲಯಗಳಲ್ಲಿ ಹೆಚ್ಚುವರಿಯಾದ ವಿದ್ಯಾರ್ಥಿಗಳಿಗೆ ಬಾಡಗಿ ಕಟ್ಟಡ ಪಡೆದು, ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮವಹಿಸಬೇಕು. ವಿವಿಧ ಯೋಜನೆಯಡಿ ಕಂದಾಯ ಇಲಾಖೆಗೆ ಬಂದಂತಹ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಅರ್ಜಿಗಳ ಇತ್ಯರ್ಥಕ್ಕೆ ಕ್ರಮವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ವಿಜಯ ಕುಮಾರ್ ಆಜೂರ್, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸಂಪತ್ ಗುಣಾರಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಕೋಲಾರ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್ ಕುಮಾರ್ ಬಾವಿದೊಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಜಿಲ್ಲಾ ಪಂಚಾಯತಿಯ ಯೋಜನಾ ಮತ್ತು ಅಂದಾಜು ಮೌಲ್ಯಮಾಪನ ಅಧಿಕಾರಿಗಳಾದ ಎ.ಬಿ.ಅಲ್ಲಾಪೂರ, ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.