ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಮಹಿಳಾ ತರಬೇತಿ ಯೋಜನೆಯಡಿ ಫೀಲ್ಡ್ ಟೆಕ್ನಶಿಯನ್ * ಕಂಪ್ಯೂಟಿಂಗ್ ಪೆರಿಫೆರಲ್ಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
೨೦೨೪-೨೫ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ನೊಂದಣಿಯಾದ ಇಂಡಿ ತಾಲೂಕಿನ ಎಸ್.ಕೆ.ಕಂಪ್ಯೂಟರ್ ಇನ್ಸ್ಟಿಟ್ಯೂಟ್ ಇಂಡಿ ಸಂಸ್ಥೆ ಮೂಲಕ ಜಿಲ್ಲೆಯಲ್ಲಿ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಎಸ್.ಕೆ. ಕಂಪ್ಯೂಟರ್ ಇನ್ಸಟಿಟ್ಯೂಟ್ ಎ.ಬಿ.ಪಾಟೀಲ ಕಾಂಪ್ಲೆಕ್ಸ್, ಸಿಂದಗಿ ರಸ್ತೆ, ಇಂಡಿ ಸಂಸ್ಥೆಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ : ೧೦-೦೬-೨೦೨೫ರೊಳಗಾಗಿ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೮೨೯೬೨೮೭೩೬೩, ೯೯೭೨೭೮೫೭೭೧ ಸಂಖ್ಯೆಗೆ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
