Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಾಲ್ಮೀಕಿ ಹಗರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ:
(ರಾಜ್ಯ ) ಜಿಲ್ಲೆ

ವಾಲ್ಮೀಕಿ ಹಗರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ:

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೈಕೋರ್ಟ್‌ನ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ | ಸಿಬಿಐನಿಂದ ಸಮಗ್ರ ತನಿಖೆ ಕೋರಿ ರಿಟ್​ ಅರ್ಜಿ ಸಲ್ಲಿಸಿದ್ದ ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್​ ಬಂಗಾರಪ್ಪ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್‌ ಮಂಗಳವಾರ ಮಹತ್ವದ ಆದೇಶ ನೀಡಿದೆ.
ಹೈಕೋರ್ಟ್‌ನ ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್​ ಬಂಗಾರಪ್ಪ ಅವರು ರಿಟ್​ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್, ವಿಶೇಷ ತನಿಖಾ ತಂಡದ(SIT) ತನಿಖೆಯನ್ನು ರದ್ದುಗೊಳಿಸಿ, ಪ್ರಕರಣದ ಸಮಗ್ರ ತನಿಖೆಗೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ. ಅಲ್ಲದೇ ಎಸ್‌ಐಟಿ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿದೆ.
ಇನ್ನು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್​ ಬ್ಯಾಂಕ್​ ಆಫ್​ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿತ್ತು.
ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್ ಮನವಿ ಮಾಡಿತ್ತು. ಆದರೆ, ಹೈಕೋರ್ಟ್​ ಈ ಮನವಿಯನ್ನು ತಿರಸ್ಕರಿಸಿತ್ತು. ಈಗ ಬಿಜೆಪಿ ನಾಯಕರ ಅರ್ಜಿ ಪುರಸ್ಕರಿಸಿ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಹಲವರಿಗೆ ಢವ ಢವ ಶುರುವಾಗಿದೆ.

ಏನಿದು ಪ್ರಕರಣ?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆಯ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿದೆ.
ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು.
ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.
ಬಳಿಕ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಇಡಿ ಅವರನ್ನು ವಶಕ್ಕೆ ಪಡೆದುಕೊಂಡು ಬಂಧನಕ್ಕೆ ಒಳಪಡಿಸಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.