Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ಶಿಕ್ಷಣ, ತರಬೇತಿಯಿಂದ ಉದ್ಯಮದಲ್ಲಿ ಯಶಸ್ಸು ಸಾಧ್ಯ
(ರಾಜ್ಯ ) ಜಿಲ್ಲೆ

ಉತ್ತಮ ಶಿಕ್ಷಣ, ತರಬೇತಿಯಿಂದ ಉದ್ಯಮದಲ್ಲಿ ಯಶಸ್ಸು ಸಾಧ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

*ಉದಯರಶ್ಮಿ ದಿನಪತ್ರಿಕೆ*

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ಕಾಲೇಜ್ ಆಫ್ ಕಾಮರ್ಸ್(ಸ್ವಾಯತ್ತ)ನ ಮ್ಯಾನೆಜಮೆಂಟ್ ಆಫ್ ರಿಸರ್ಚ್ ಸೆಂಟರ್ ನಲ್ಲಿ ಗುರುವಾರ ಪೂಲ್ ಕ್ಯಾಂಪಸ್ ಡ್ರೈವ್- 2025 ನಡೆಯಿತು. 
  ಈ ಪೂಲ್ ಕ್ಯಾಂಪಸ್ ಡ್ರೈವ್-2025 ನ್ನು ಬಿ.ಎಲ್. ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ವಿ. ಎಸ್. ಬಗಲಿ ಉದ್ಘಾಟಿಸಿದರು.
  ಬಳಿಕ ಮಾತನಾಡಿದ ಅವರು, ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಿನಾಭಾವ ಸಂಬಂಧವಿದೆ.  ಉತ್ತಮ ಶಿಕ್ಷಣ, ತರಬೇತಿ ಪಡೆಯುವುದರಿಂದ ಉದ್ಯಮದಲ್ಲಿ ಯಶಸ್ಸು ಸಾಧಿಸಬಹುದು. ಇದರಲ್ಲಿ ಪರಸ್ಪರ ಸಹಯೋಗದಿಂದ ಉನ್ನತ ಸಾಧನೆ ಮಾಡಬಹುದು.  ವಿದ್ಯಾರ್ಥಿಗಳು ಇಂಥ ಪೂಲ್ ಕ್ಯಾಂಪಸ್ ಡ್ರೈವ್ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
  ಈ ಪೂಲ್ ಕ್ಯಾಂಪಸ್ ಡ್ರೈವ್-2025ನಲ್ಲಿ ಒಟ್ಟು 10 ಹೆಸರಾಂತ ಕಂಪನಿಗಳು ಪಾಲ್ಗೋಂಡಿದ್ದವು. ಐಟಿ, ಹಣಕಾಸು, ಮಾರ್ಕೆಟಿಂಗ್, ರಿಟೇಲ್, ಕನ್ಸಲ್ಟಿಂಗ್ ಮತ್ತು ಉತ್ಪಾದನೆ ಕ್ಷೇತ್ರಗಳಿಗೆ ಸೇರಿದದ ಫೋನ್ಪೇ, ಆರ್.ಎನ್.ಎಸ್ ಮೋಟಾರ್ಸ್, ಜಿಯೋ, ಯತಿ ಕಾರ್ಪ್, ಸಂತೋಷ್ ಆಟೋ, ಪೇಟಿಎಂ ಮುಂತಾದ ಕಂಪನಿಗಳು ಪಾಲ್ಗೋಂಡು ಮ್ಯಾನೇಜ್ಮೆಂಟ್ ಮತ್ತು ಸಂಬಂಧಿತ ವಿಭಾಗಗಳಲ್ಲಿ ಅಂತಿಮ ವರ್ಷದ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರ ಸಂದರ್ಶನ ನಡೆಸಿದರು. 
ನಾನಾ ಸಂಸ್ಥೆಗಳಿಂದ 450ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪೂಲ್ ಕ್ಯಾಂಪಸ್ ಡ್ರೈವ್ ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದರು.  ಈ ಸಂದರ್ಭದಲ್ಲಿ ನೇಮಕಾತಿ ಪೂರ್ವ-ನಿಯೋಜನೆ ಮಾತುಕತೆಗಳು, ಗುಂಪು ಚರ್ಚೆಗಳು, ತಾಂತ್ರಿಕ ಸಂದರ್ಶನ ಮತ್ತು ಮಾನವ ಸಂಪನ್ಮೂಲ ಹೀಗೆ ನಾನಾ ರೌಂಡ್ಸ್ ಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಯಶೋಧಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ ನ ಪರಾಗ್ ಸತ್ರಾಲ್ಕರ, ಬೆಂಗಳೂರಿನ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಇಓ ಯತೀಶ. ಕೆ. ಎಸ್, ಬೆಂಗಳೂರಿನ ಫೋನ್ ಪೇ ಏರಿಯಾ ಸೇಲ್ಸ್ ಮ್ಯಾನೇಜರ್ ಪರ್ವೇಜ್, ವಿಜಯಪುರ ಸಂತೋಷ್ ಗ್ರೂಪ್ ನ ಜ್ಯೋತಿ ಗೋಣಿ, ಐ.ಎಫ್.ಟಿ ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ ದೀಪ್ತಿ ಮುಂತಾದವರು ಉಪಸ್ಥಿತರಿದ್ದರು.
  ಕಾಲೇಜಿನ ನಿರ್ದೇಶಕ ಡಾ. ಸಿ. ಜಿ. ಬ್ಯಾಹಟ್ಟಿ ಸ್ವಾಗತಿಸಿದರು.  ಪ್ರಾಚಾರ್ಯ ಪ್ರೊ. ಬಿ. ಎಸ್. ಬೆಳಗಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ಲೇಸಮೆಂಟ್ ಅಧಿಕಾರಿ ಡಾ. ಮಹಾಂತೇಶ ಕನಮಡಿ ವಂದಿಸಿದರು, ಡಾ. ಅಶ್ವಿನಿ ಯರನಾಳ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮೋಬೈಲ್ನಿಂದ ನಶಿಸಿ ಹೋಗುತ್ತಿರುವ ರಕ್ತ ಸಂಬಂಧಗಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.