ಉಚಿತವಾಗಿರುವ ಅತ್ಯಾಧುನಿಕ ಸೌಕರ್ಯಗಳ ಸದುಪಯೋಗಪಡಿಸಿಕೊಳ್ಳಲು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಿಳೆಯರು ಹಾಗೂ ಹದಿಹರೆಯದವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಮುಂದಾಗುವ ಅನಾರೋಗ್ಯವನ್ನು ತಡೆಗಟ್ಟಬಹುದು. ಆರೋಗ್ಯ ಸದೃಢವಾಗಿದ್ದರೆ ಮಾತ್ರ ಭವ್ಯ ರಾಷ್ಟ್ರದ ನಿರ್ಮಾಣದ ಕನಸು ಪೂರ್ಣಗೊಳ್ಳುತ್ತದೆ ಎಂದು ಆರ್ಟ ಆಫ್ ಗಿವಿಂಗ್ ಫೌಂಡೇಶನ್ ರಾಷ್ಟ್ರೀಯ ರಾಯಭಾರಿ ಶಿಫಾ ಜಮಾದಾರ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆರ್ಟ ಆಫ್ ಗಿವಿಂಗ್ ಫೌಂಡೇಶನ್ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಅರಿವು ಮತ್ತು ನೆರೆಹೊರೆಯವರ ಉತ್ತಮ ಬಾಂಧವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಯುವ ಜನತೆ ದುಶ್ಚಟಗಳಿಗೆ ದಾಸರಾಗಿದ್ದಾರೆ. ಮಾದಕ ವಸ್ತುಗಳ ಸೇವನೆ ಹೆಚ್ಚಾಗಿ ಕಂಡು ಬರುತ್ತಿದೆ. ಇದನ್ನು ತಡೆಗಟ್ಟಲು ಯುವಜನತೆಗೆ ಅರಿವು ಮೂಡಿಸಬೇಕಾಗಿದೆ ಎಂದು ಶಿಫಾ ನುಡಿದರು.
ಅಧ್ಯಕ್ಷತೆ ವಹಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಇಂದಿನ ವಾತಾವರಣದಲ್ಲಿ ಒತ್ತಡ, ಆತಂಕ ಮತ್ತು ಕಿನ್ನತೆ ಹೆಚ್ಚಾಗಿ ಕಂಡು ಬರುತ್ತಿದೆ. ಅದ್ಯಾಗೂ ಮಾನಸಿಕ ಆರೋಗ್ಯವನ್ನು ಸಮಸ್ಯೆಯಾಗಿ ಪರಿಗಣಿಸಲಾಗಿದೆ. ನಮ್ಮ ಸವಾಲು ದೌರ್ಬಲ್ಯವಲ್ಲ ಶಕ್ತಿಯ ಸಂಕೇತ ಎಂದು ನಾವು ನಮ್ಮನ್ನು ನೆನಪಿಸಿಕೊಳ್ಳಬೇಕು. ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದಷ್ಟು ಮುಖ್ಯವಾಗಿದೆ. ಒಟ್ಟಾಗಿ ಕೆಲಸ ಮಾಡುವದರಿಂದ ನಾವು ಜಾಗೃತಿ ಹೆಚ್ಚಿಸಬಹುದು ಎಂದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಜಾವೀದ ಜಮಾದಾರ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಇಲಿಯಾಸಅಹ್ಮದ ಸಿದ್ದಿಕಿ ಮಾತನಾಡಿದರು.
ಶ್ರೀಮತಿ ಎಸ್.ಎ. ಮೋಮಿನ, ವೀಣಾ ಕುಲಕರ್ಣಿ, ರೇಖಾ ಇಂಗಳೇಶ್ವರ, ಸುರೇಂದ್ರಕುಮಾರ ಮಾನಕರ ಉಪಸ್ಥಿತರಿದ್ದರು.
ಆರ್ಟ್ ಆಫ್ ಗಿವಿಂಗ್ ಫೌಂಡೇಶನ ಪರವಾಗಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬಿಸ್ಕಿಟ್, ಜ್ಯೂಸ್ ಮುಂತಾದ ವಸ್ತುಗಳನ್ನೊಳಗೊಂಡ ಆಹಾರ ಕಿಟ್‌ನ್ನು ವಿತರಿಸಲಾಯಿತು.

“ವಿಜಯಪುರ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ರೀತಿಯ ಎಲ್ಲ ಬಗೆಯ ಸೌಕರ್ಯಗಳು ಮತ್ತು ರೀತಿಯ ಶಸ್ತ್ರ ಚಿಕಿತ್ಸೆಗಳು ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮವಾಗಿ ಸೇವೆ ನೀಡಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಾರ್ವಜನಿಕರು ಇದರ ಲಾಭ ಪಡೆಯಬೇಕು.”
– ಡಾ.ಶಿವಾನಂದ ಮಾಸ್ತಿಹೊಳಿ
ಜಿಲ್ಲಾ ಶಸ್ತ್ರ ಚಿಕಿತ್ಸಕರು, ವಿಜಯಪುರ

