ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಾಲ್ಲೂಕಿನ ಟಕ್ಕಳಕಿ ಎಲ್.ಟಿ. 02 ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಯಶ್ರೀ ಕೆ. ಹೂಗಾರ ಅವರಿಗೆ ಅಮ್ಮ ಪೌಂಡೇಶನ ವತಿಯಿಂದ ಕೊಡಮಾಡುವ ಬಸವಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ರವಿವಾರ ನಡೆಯುವ ರಾಜ್ಯ ಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಈ ಪ್ರಶಸ್ತಿಯನ್ನು ಪಡೆಯಲ್ಲಿದ್ದಾರೆ. ಹಲವು ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇವರಿಗೆ ಗಣ್ಯ ವ್ಯಕ್ತಿಗಳ, ಚಿಂತಕರ ಹಾಗೂ ಸಾಹಿತಿಗಳ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

