Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತರು ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು :ಕಮತರ
(ರಾಜ್ಯ ) ಜಿಲ್ಲೆ

ಪತ್ರಕರ್ತರು ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು :ಕಮತರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳಾ ವಿವಿಯಲ್ಲಿ ‘ಪತ್ರಿಕಾ ದಿನಾಚರಣೆ’ & ದಿನಪತ್ರಿಕೆ ಪುಟವಿನ್ಯಾಸ ತಂತ್ರಗಳು’ ಕುರಿತು ಕಾರ್ಯಾಗಾರ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ ಎಂದು ಹಿರಿಯ ಪತ್ರಕರ್ತ ಜಿ.ಎಸ್.ಕಮತರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮಲ್ಲಪ್ಪ ರಾಮಪ್ಪ ಮಾನಕರ ದತ್ತಿನಿಧಿ ಉಪನ್ಯಾಸದ ಅಡಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಪತ್ರಿಕಾ ದಿನಾಚರಣೆ ಹಾಗೂ ದಿನಪತ್ರಿಕೆ ಪುಟವಿನ್ಯಾಸ ತಂತ್ರಗಳು’ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಪುಟ ವಿನ್ಯಾಸ ಎನ್ನುವುದು ಎಲ್ಲಾ ಪತ್ರಿಕೆಗಳಿಗೂ ಅನ್ವಯವಾಗುತ್ತದೆ. ಬದುಕು ತಂತ್ರಗಾರಿಕೆಯಿಂದ ಕೂಡಿದಾಗ, ಅದರ ಜೊತೆಗೆ ಕಲಿಯುವುದು ಅನಿವಾರ್ಯವಾಗುತ್ತದೆ. ಕಲಿತ ವಿದ್ಯೆ ಎಂದಿಗೂ ವ್ಯರ್ಥವಾಗುವುದಿಲ್ಲ. ಉತ್ತಮ ಪತ್ರಕರ್ತನಾಗಲು ಭಾಷಾ ನೈಪುಣ್ಯತೆ, ಶಬ್ದಗಳ ಸರಿಯಾದ ಬಳಕೆ, ಬಹುಭಾಷಾ ಜ್ಞಾನ ಅಗತ್ಯ. ಇಂದು ಪತ್ರಿಕೋದ್ಯಮವು ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅವಶ್ಯಕತೆ ಇದೆ ಎಂದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಪ್ರಜಾವಾಣಿಯ ಗ್ರಾಫಿಕ್ ಡಿಸೈನರ್ ಶಶಿಕಿರಣ ದೇಸಾಯಿ ಮಾತನಾಡಿ, ನಿಮ್ಮ ಕಾರ್ಯಕ್ಷಮತೆ ಹಾಗೂ ಸಾಮರ್ಥ್ಯದಿಂದ ಪತ್ರಿಕೋದ್ಯಮದ ಪುಟ ವಿನ್ಯಾಸ ಕ್ಷೇತ್ರದಲ್ಲಿ ಹೊಸತನವನ್ನು ಸಾಧಿಸಬಹುದು. ಇಂದಿನ ದಿನಗಳಲ್ಲಿ ನಾವೆಲ್ಲರೂ ಬೆರಳ ತುದಿಯಲ್ಲಿ ಡಿಸೈನ್ ಮಾಡಲು ಶಕ್ತರಾಗಿದ್ದೇವೆ. ಹೊಸ ತಂತ್ರಜ್ಞಾನಗಳ ಬಳಕೆಯಿಂದ ಪುಟ ವಿನ್ಯಾಸವನ್ನು ಹೆಚ್ಚು ಕ್ರಿಯಾಶೀಲವನ್ನಾಗಿ ರೂಪಿಸಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಬಾಗಲಕೋಟೆಯ ಫೋಟೋಗ್ರಾಫರ್ ಸಂಗಮೇಶ ಬಡಿಗೇರ್ ಮಾತನಾಡಿ, ಪತ್ರಿಕೋದ್ಯಮ ಕೇವಲ ಕಾರ್ಯಕ್ರಮ ಹಾಗೂ ರಾಜಕೀಯ ಸುದ್ದಿಗಳ ರಿಪೋರ್ಟಿಂಗ್ ಮಾತ್ರವಲ್ಲ. ಛಾಯಾಚಿತ್ರ ಪತ್ರಿಕೋದ್ಯಮದಲ್ಲಿಯೂ ಸಾಕಷ್ಟು ಅವಕಾಶಗಳಿವೆ. ವಿಭಿನ್ನ ದೃಷ್ಟಿಕೋನದಲ್ಲಿ ತೆಗೆದ ಛಾಯಾಚಿತ್ರಗಳ ಮೂಲಕ ಪತ್ರಿಕೋದ್ಯಮದಲ್ಲಿ ನಿಮ್ಮದೇ ಆದ ಛಾಪು ಮೂಡಿಸಬಹುದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಶೋಧನಾ ವಿದ್ಯಾರ್ಥಿನಿಯರಾದ ಫಿಲೋಮೀನಾ ಸ್ವಾಗತಿಸಿದರು. ಜಯಶ್ರೀ ತಳವಾರ ಅತಿಥಿಗಳನ್ನು ಪರಿಚಯಿಸಿದರು. ಸುಷ್ಮಾ ಪವಾರ ನಿರೂಪಿಸಿದರು. ಪವಿತ್ರಾ ಕಂಬಾರ ವಂದಿಸಿದರು.

“ತಂತ್ರಜ್ಞಾನವು ಒಂದು ಕಡೆ ಸವಾಲುಗಳನ್ನೂ, ಇನ್ನೊಂದೆಡೆ ಹೊಸ ಅವಕಾಶಗಳನ್ನೂ ನೀಡುತ್ತಿದೆ. ಕೃತಕ ಬುದ್ಧಿಮತ್ತೆಯನ್ನು ಸರಿಯಾಗಿ ಬಳಸಿಕೊಂಡು ವೃತ್ತಿಜೀವನ ರೂಪಿಸಿಕೊಳ್ಳಬೇಕು. ತಂತ್ರಜ್ಞಾನ ನಿರಂತರವಾಗಿ ಬದಲಾಗುತ್ತಿರುವ ಸಂದರ್ಭದಲ್ಲಿ, ಅಧ್ಯಯನ ಶೀಲತೆಯಿಂದಲೇ ಯಶಸ್ಸು ಸಾಧಿಸಬಹುದು.”

– ಪ್ರೊ. ಓಂಕಾರ ಕಾಕಡೆ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.