Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೈಹಿಕ ಶಿಕ್ಷಕರು, ಸೈನಿಕರು ಈ ದೇಶದ ಸಂಪತ್ತು :ಅವಟಿ
(ರಾಜ್ಯ ) ಜಿಲ್ಲೆ

ದೈಹಿಕ ಶಿಕ್ಷಕರು, ಸೈನಿಕರು ಈ ದೇಶದ ಸಂಪತ್ತು :ಅವಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ವಯಸ್ಸು ದೇಹಕ್ಕೆ ಮಾತ್ರವಾಗುತ್ತದೆ, ಅದು ಮನಸ್ಸಿಗೆ ಅಲ್ಲ. ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕರು ಹಾಗೂ ಸೈನಿಕರು ಈ ದೇಶದ ಸಂಪತ್ತು ಎಂದು ಬಸವನ ಬಾಗೇವಾಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್. ಅವಟಿ ಹೇಳಿದರು.
ತಾಲೂಕಿನ ಹಣಮಾಪೂರದ ಗ್ರಾಮೀಣ ವಿದ್ಯಾವರ್ಧಕ ಸಂಘದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಯೋಸಹಜ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕರ ಬೀಳ್ಕೊಡುಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ನಿಯಮದಂತೆ 60ವರ್ಷ ಆದ ನಂತರ ಎಲ್ಲರೂ ವೃತ್ತಿಯಿಂದ ನಿವೃತ್ತಿ ಆಗಲೇಬೇಕು. ನಿವೃತ್ತಿ ನಂತರ ಕುಟುಂಬ ಹಾಗೂ ಬಂಧುಗಳೊಂದಿಗೆ ವಿಶ್ರಾಂತಿಯಿಂದ ಬದುಕ ಬೇಕಾಗುತ್ತದೆ. ಹಣಮಾಪೂರ ಗ್ರಾಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಮೂರು ದಶಕಗಳ ಕಾಲ ಮಕ್ಕಳಿಗೆ ಒಳ್ಳೆಯ ಕ್ರೀಡಾ ತರಬೇತಿ ನೀಡಿ ಅವರನ್ನು ರಾಜ್ಯ ಮಟ್ಟದಲ್ಲಿ ಗ್ರಾಮದ ಹೆಸರನ್ನು ಹಾಗೂ ಮಕ್ಕಳನ್ನು ಗುರುತಿಸಲು ಕಾರ್ಣಿಕರ್ತ ದೈಹಿಕ ಶಿಕ್ಷಕರಾದ ಎಸ್.ಎಂ. ಬರಗಿ ಹಾಗೂ ಕೆ.ಜಿ. ಹಳ್ಳೂರರವರ ಸೇವೆ ಅಪಾರವಾದದ್ದು ಅದಕ್ಕೆ ಇಲಾಖೆ ಅವರನ್ನು ಅಭಿನಂದಿಸುತ್ತದೆ. ದೇಶದ ವಿವಿಧ ರಾಜ್ಯಗಳಲ್ಲಿ ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧರಾದ ಈರಣ್ಣ ಹಳ್ಳೂರ ಹಾಗೂ ಮಲ್ಲಪ್ಪ ಮಡಿವಾಳರ ಅವರ ಸೇವೆ, ತ್ಯಾಗ ಬಹಳ ದೊಡ್ಡದಿದೆ ಎಂದರು.
ವಯೋಸಹಜ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕರಾದ ಎಸ್.ಎಂ. ಬರಗಿ, ಕೆ.ಜಿ. ಹಳ್ಳೂರ ಹಾಗೂ ನಿವೃತ್ತ ಯೋಧರಾದ ಈರಣ್ಣ ಹಳ್ಳೂರ, ಮಲ್ಲಪ್ಪ ಮಡಿವಾಳರ ರವರನ್ನು ಎತ್ತಿನ ಗಾಡಿಯಲ್ಲಿ ಸಕಲ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಶಿಕ್ಷಕರು, ಮಕ್ಕಳು, ಗ್ರಾಮಸ್ಥರು ಭಾಗವಸಿದ್ದರು.
ಪ್ರಾಸ್ತಾವಿಕವಾಗಿ ಮುಖ್ಯ ಶಿಕ್ಷಕ ಆರ್.ಎಸ್.ತುಂಗಳ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮುಖ್ಯ ಶಿಕ್ಷಕ ಸಂಗಮೇಶ ಪೂಜಾರಿ, ನಿವೃತ್ತ ದೈಹಿಕ ಶಿಕ್ಷಕ ಎಸ್.ಎಂ.ಬರಗಿ, ಕೆ.ಜಿ. ಹಳ್ಳೂರ ಮಾತನಾಡಿದರು.
ಸಂಗಮೇಶ ಕುಬಕಡ್ಡಿ, ಬಾಲಪ್ಪ ಗೂಗಿಹಾಳ ವಿದ್ಯಾರ್ಥಿಗಳ ಅನಿಸಿಕೆ ಹೇಳಿದರು.
ಎಸ್ ಎಲ್ ಪವಾರ ಶಿಕ್ಷಕರ ಅನಿಸಿಕೆ ವ್ಯಕ್ತಪಡಿಸಿದರು.
ಈ ವೇಳೆ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕರಾದ ಎಸ್.ಎಂ. ಬರಗಿ, ಕೆ.ಜಿ. ಹಳ್ಳೂರ ಹಾಗೂ ನಿವೃತ್ತ ಯೋಧರಾದ ಈರಣ್ಣ ಹಳ್ಳೂರ, ಮಲ್ಲಪ್ಪ ಮಡಿವಾಳರ ಅವರನ್ನು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕರ ಸಂಘಟನೆಯ ಪ್ರಮುಖರು, ಶಾಲಾ ಕಾಲೇಜಿನ ಮುಖ್ಯಸ್ಥರು, ಗೆಳೆಯರ ಬಳಗ, ಹಳೆ ವಿದ್ಯಾರ್ಥಿಗಳ ಬಳಗ ಹಾಗೂ ಕುಟುಂಬಸ್ಥರು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದ ಸಾನಿಧ್ಯವನ್ನು ರುದ್ರುಸ್ವಾಮಿ ಹಿರೇಮಠ ವಹಿಸಿದ್ದರು. ಅಧ್ಯಕ್ಷತೆಯನ್ನು ನಾಗನಗೌಡ ಬಿರಾದಾರ ವಹಿಸಿದ್ದರು. ಅತಿಥಿಗಳಾಗಿ ಸಂಸ್ಥೆ ಅಧ್ಯಕ್ಷ ವ್ಹಿ.ಡಿ. ಕೊರಣ್ಣವರ, ಎಸ್.ಎಂ. ಬರಗಿ, ದ್ರಾಕ್ಷಾಯಣಿ ಬರಗಿ, ಕೆ.ಜಿ. ಹಳ್ಳೂರ, ಸುನೀತಾ ಹಳ್ಳೂರ, ಎಸ್.ಎಸ್. ಅವಟಿ, ಸಂಗಮೇಶ ಪೂಜಾರಿ, ಮುತ್ತು ಸಾಹುಕಾರ ಹಳ್ಳೂರ, ಬಾಬು ನರಿಯವರ, ನಿಂಗನಗೌಡ ಪಾಟೀಲ, ಹಣಮಂತಗೌಡ ಕುಪಕಡ್ಡಿ, ಎಂ.ಜಿ. ಪಾಟೀಲ, ಎಂ.ಕೆ. ಚೌದ್ರಿ, ಈರಣ್ಣ ಹಳ್ಳೂರ, ಎಂ.ಎಂ. ಮಡಿವಾಳರ, ಆರ್.ಎಸ್. ತುಂಗಳ, ಮುತ್ತಪ್ಪ ಮುರನಾಳ, ದಾದಮಿ ಅಂಗಡಿ ಉಪಸ್ಥಿತರಿದ್ದರು.
ಶಿಕ್ಷಕ ಆರ್.ಟಿ. ಸಜ್ಜನ ಸ್ವಾಗತಿಸಿದರು. ಶಿಕ್ಷಕ ವಿಜಯ ನಿರೂಪಿಸಿದರು. ಶಿಕ್ಷಕ ಪಿ.ಎನ್. ಕೂಡಗಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.