Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ

ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಸ್ಲಾಂ ಉದರದಲ್ಲಿ ಹುಟ್ಟಿದ ಮೊಹರಂ ಹಿಂದೂಗಳಿಂದ ಜೋಪಾನ
(ರಾಜ್ಯ ) ಜಿಲ್ಲೆ

ಇಸ್ಲಾಂ ಉದರದಲ್ಲಿ ಹುಟ್ಟಿದ ಮೊಹರಂ ಹಿಂದೂಗಳಿಂದ ಜೋಪಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೊಹರಂ ಹಬ್ಬ ಇಸ್ಲಾಂ ಉದರದಲ್ಲಿ ಹುಟ್ಟಿದರೂ ಹಿಂದೂಗಳ ಕರಕಮಲದಲ್ಲಿ ಜೋಪಾನವಾಗಿ ಜೀವಂತವಾಗಿದೆ. ಇಂದು ದೇಶದಲ್ಲಿ ಹಿಂದೂ-ಮುಸ್ಲಿಂ ಅನೋನ್ಯವಾಗಿರಬೇಕಾದರೆ ಈ ಪವಿತ್ರ ಮೊಹರಂ ಹಬ್ಬವೇ ಕಾರಣವಾಗಿದೆ. ತ್ಯಾಗ – ಬಲಿದಾನದ ಜೊತೆಗೆ ಪ್ರೀತಿ ಮತ್ತು ಸ್ನೇಹದ ಕುರುಹಾಗಿ ಮೊಹರಂ ಗಟ್ಟಿಯಾಗಿ ನಿಂತಿದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.
ಕನ್ನಡ ಜಾನಪದ ಪರಿಷತ್ ಕೂಡಗಿ ವಲಯ ಘಟಕದ ವತಿಯಿಂದ ಕೊಲ್ಹಾರ ತಾಲೂಕಿನ ಕವಲಗಿ ಗ್ರಾಮದ ಚಾವಡಿಯಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಏರ್ಪಡಿಸಿದ ” ರಿವಾಯತ ಸಂಭ್ರಮ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಭಾರತದ ಹಬ್ಬ- ಉತ್ಸವಗಳು ನಮ್ಮ ಮೂಲ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿವೆ.ಜನಪದ ಕಲಾವಿದರು ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬೆಳೆಸುವ ನಿಟ್ಟಿನಲ್ಲಿ ಸಮಾಜ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಸದಸ್ಯ ಕಲಾವಿದ ಮೌಲಸಾಹೇಬ ಜಹಾಗಿರದಾರ ಮಾತನಾಡಿ, ಮೊಹರಂ ಉತ್ಸವದ ಹತ್ತು ದಿನಗಳಲ್ಲಿ ಜಾನಪದ ಸಂಸ್ಕೃತಿಯ ಪ್ರತಿಯೊಂದು ವಿಚಾರಗಳು ಅನಾವರಣಗೊಳ್ಳುತ್ತವೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಈ ಹಬ್ಬದಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆಸುತ್ತಾರೆ ಎಂದರು.
ಕನ್ನಡ ಜಾನಪದ ಪರಿಷತ್ ಕೊಲ್ಹಾರ ತಾಲೂಕು ಅಧ್ಯಕ್ಷ ಮಲ್ಲಪ್ಪ ಗಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಾವಿದರು ಸಂಕಷ್ಟದಲ್ಲಿದ್ದಾರೆ. ಸರಕಾರ ಮತ್ತು ಸಮುದಾಯ ಕಲಾವಿದರನ್ನು ಗೌರವಿಸುವ ಕೆಲಸ ಮಾಡಬೇಕೆಂದು ವಿನಂತಿಸಿದರು.
ಕನ್ನಡ ಜಾನಪದ ಪರಿಷತ್ ಕೂಡಗಿ ವಲಯ ಅಧ್ಯಕ್ಷ ದುಂಡಯ್ಯ ಮಠಪತಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಶಿವರುದ್ರಯ್ಯ ಹೀರೆಮಠ , ಈರಯ್ಯ ಮಠಪತಿ ,ಕಜಾಪ ಕಾರ್ಯದರ್ಶಿ ಭೀಮಶಿ ಬೀಳಗಿ, ಅರುಣ ಗಾಣಿಗೇರ,ಶಂಕ್ರಪ್ಪ ತಳವಾರ , ಹನುಮಂತಪ್ಪ ಚಿಲವಾಡಗಿ, ಬಸಪ್ಪ ಬ್ಯಾಲ್ಯಾಳ ಮತ್ತಿತರರು ಉಪಸ್ಥಿತರಿದ್ದರು.
ಕಲಾವಿದರನ್ನು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕವಲಗಿ, ಕೊಲ್ಹಾರ, ಅರಸುಣಗಿ, ಬಳೂತಿ, ಗಣಿ, ತೆಲಗಿ, ಉಪ್ಪಲದಿನ್ನಿ, ಜೈನಾಪುರ ರಿವಾಯತ ಮತ್ತು ಹೆಜ್ಜೆ ಕುಣಿತ ಕಲಾವಿದರು ಇಡೀ ರಾತ್ರಿ ಕಲಾ ಪ್ರದರ್ಶನ ನಡೆಸಿದರು.
ಶಿಕ್ಷಕ ಮಂಜುನಾಥ ದಳವಾಯಿ ನಿರೂಪಿಸಿದರು. ಮುದ್ದಣ್ಣ ತಳವಾರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ

ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು

ದಿನಕ್ಕೊಂದು ವಚನ, ಹಳಕಟ್ಟಿಯವರಿಗೆ ನಿಜ ನಮನ :ನಾರಾಯಣ ಶಾಸ್ತ್ರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು
    In (ರಾಜ್ಯ ) ಜಿಲ್ಲೆ
  • ದಿನಕ್ಕೊಂದು ವಚನ, ಹಳಕಟ್ಟಿಯವರಿಗೆ ನಿಜ ನಮನ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜು.29ರೊಳಗೆ ಮತದಾರರ ವಿವರ ದೃಢೀಕರಿಸಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಅಂಗೈಯಲ್ಲಿ ಅರಮನೆ
    In ಭಾವರಶ್ಮಿ
  • ಮಾಹಿತಿಗಳ ಜಾಲದಲ್ಲಿ ಮಕ್ಕಳು ಸಿಲುಕದಿರಲಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026
    In ದಿನಪತ್ರಿಕೆ
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.