Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ರಮ ಗಣಿಗಾರಿಕೆ ಪ್ರಕರಣಗಳ ಪರಿಶೀಲನೆಗೆ ಸಂಪುಟ ಉಪಸಮಿತಿ ರಚನೆ
(ರಾಜ್ಯ ) ಜಿಲ್ಲೆ

ಅಕ್ರಮ ಗಣಿಗಾರಿಕೆ ಪ್ರಕರಣಗಳ ಪರಿಶೀಲನೆಗೆ ಸಂಪುಟ ಉಪಸಮಿತಿ ರಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ‘ಅಕ್ರಮ ಗಣಿಗಾರಿಕೆ’ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿ ಹಲವು ವಿಷಯಗಳ ಕುರಿತು ಪರಿಶೀಲಿಸಲು ಮತ್ತು ಸೂಕ್ತ ಕ್ರಮಗಳನ್ನು ಶಿಫಾರಸು ಮಾಡಲು ರಾಜ್ಯ ಸರ್ಕಾರ ಶನಿವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಆರು ಸದಸ್ಯರ ಸಂಪುಟ ಉಪಸಮಿತಿ ರಚಿಸಿದೆ.
ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲು ಸಂಪುಟ ಉಪಸಮಿತಿಗೆ ಸೂಚಿಸಲಾಗಿದೆ.
ಗೃಹ ಸಚಿವ ಜಿ ಪರಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹಾದೇವಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಸಂಪುಟ ಉಪಸಮಿತಿಯ ಸದಸ್ಯರಾಗಿದ್ದಾರೆ.
ಜುಲೈ 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಪಸಮಿತಿ ರಚಿಸಲು ನಿರ್ಧರಿಸಲಾಗಿತ್ತು.
“ಗಣಿಗಾರಿಕೆಯಲ್ಲಿನ ಅಕ್ರಮಗಳ ಬಗ್ಗೆ, ವಿಶೇಷವಾಗಿ ರಿಕವರಿ ಆಯುಕ್ತರ ನೇಮಕ ಮತ್ತು ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಚರ್ಚಿಸಲು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಲು ಸಂಪುಟ ಉಪಸಮಿತಿ ರಚಿಸಲಾಗಿದೆ” ಎಂದು ಅಧಿಕೃತ ಟಿಪ್ಪಣಿಯಲ್ಲಿ ತಿಳಿಸಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು “ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಲ್ಲಿ ಸರ್ಕಾರ ವಿಫಲವಾಗಿದೆ” ಎಂದು ಎಚ್ ಕೆ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ ಎಚ್ ಕೆ ಪಾಟೀಲ್ ಅವರು ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ಮತ್ತು ರಾಜ್ಯದ ಕಳೆದುಹೋದ ಸಂಪತ್ತನ್ನು ಮರಳಿ ಪಡೆಯುವುದು ಸೇರಿದಂತೆ ಹಲವು ಕಳವಳಗಳನ್ನು ವ್ಯಕ್ತಪಡಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಅಕ್ರಮ ಗಣಿಗಾರಿಕೆಯಿಂದ ಹಾರಂಗಿ ಜಲಾಶಯಕ್ಕೆ ಅಪಾಯ

ಮಡಿಕೇರಿ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯದ ಮಿತಿಯ ಬಳಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದಾಗಿ ಜಲಾಶಯಕ್ಕೆ ಅಪಾಯ ಎದುರಾಗಿದೆ ಎಂದು ಹೇಳಲಾಗಿದೆ.
ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಾಶಯದ ಮಿತಿಯ ಬಳಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಚಟುವಟಿಕೆಗಳ ಬಗ್ಗೆ ನಿವಾಸಿಗಳು ದೂರು ನೀಡುತ್ತಿರುವಂತೆಯೇ ಎಕರೆಗಟ್ಟಲೆ ಭೂಮಿಯಲ್ಲಿ ಬೆಲೆಬಾಳುವ ಮರಗಳನ್ನು ತೆರವುಗೊಳಿಸಲಾಗಿದೆ.
ದುರ್ಬಲ ಪ್ರದೇಶದಲ್ಲಿ ನಿರಂತರ ಮಾನವ ಹಸ್ತಕ್ಷೇಪವು ವಿಪತ್ತಿಗೆ ಆಹ್ವಾನ ನೀಡುತ್ತಿದೆ ಎಂದು ನಿವಾಸಿಗಳು ಭಯಪಡುತ್ತಿದ್ದಾರೆ. ಅಲ್ಲದೆ ಕೂಡಲೇ ಅಕ್ರಮ ಗಣಿಗಾರಿಕೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.