ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಇತ್ತೀಚೆಗೆ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಿ ಕರೆತರುವಾಗ ಇತ್ತೀಚಿಗೆ ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ತಲಘಟ್ಟಪುರ ಠಾಣೆಯ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಂದಗಿ ತಾಲೂಕಿನ ಓತಿಹಾಳ ಗ್ರಾಮದ ಮೆಹಿಬೂಬ್ ಗುಡ್ಡಳ್ಳಿ ಮರಣ ಹೊಂದಿದ್ದು, ಅವರ ಮನೆಗೆ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಇದರೊಂದಿಗೆ ಸಿಂದಗಿ ತಾಲೂಕಿನ ಬೂದಿಹಾಳ ಪಿ.ಹೆಚ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲೆಯ ದುರಸ್ಥಿ ಮತ್ತು ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ವೀಕ್ಷಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಅರವಿಂದ ಹಂಗರಗಿ ಸೇರಿದಂತೆ ಅನೇಕರು ಇದ್ದರು.

