Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಸೌಲಭ್ಯ ರೈತರಿಗೆ ತಲುಪಿಸಿ :ಸಿದ್ದು ಸವದಿ
(ರಾಜ್ಯ ) ಜಿಲ್ಲೆ

ಸರಕಾರಿ ಸೌಲಭ್ಯ ರೈತರಿಗೆ ತಲುಪಿಸಿ :ಸಿದ್ದು ಸವದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಿಕೆಪಿಎಸ್ ಅಧ್ಯಕ್ಷ-ಉಪಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಸರಕಾರ ರೈತರಿಗಾಗಿ ನೀಡುವ ಪ್ರತಿಯೊಂದು ಸೌಲಭ್ಯಗಳನ್ನು ಪ್ರತಿಯೊಬ್ಬರಿಗೆ ತಲುಪಿಸುವ ಜವಾಬ್ದಾರಿ ಸಹಕಾರಿ ಸಂಸ್ಥೆಯದಾಗಿದ್ದು ಅವರ ಹಿತ ಕಾಯಲು ನೂತನ ಅಧ್ಯಕ್ಷ ಉಪಾಧ್ಯಕ್ಷರು ಬದ್ದರಾಗಿರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸಲಹೆ ನೀಡಿದರು.
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಬಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಉಪಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿಯೇ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನ ರೈತ ಸಹಕಾರಿ ಸಂಸ್ಥೆಗಳು ಬಲಿಷ್ಠವಾಗಿದ್ದು ಅಭಿವೃದ್ದಿಯಲ್ಲಿ ಮುಂಚೂನಿಯಲ್ಲಿವೆ. ಈಭಾಗದ ರೈತರ ಜೀವನಾಡಿಯಾಗಿರುವ ಗ್ರಾಮದ ಪಿಕೆಪಿಎಸ್ ಸಂಸ್ಥೆ ಈಗಾಗಲೇ ಲಾಭದಲ್ಲಿದ್ದು ರೈತ, ನೇಕಾರ, ಕೂಲಿ ಕಾರ್ಮಿಕರ ಹಾಗೂ ವ್ಯಾಪಾರಸ್ಥರ ಸರ್ವತೋಮುಖ ಅಭಿವೃದ್ದಿಗೆ ಶೃಮಿಸುವ ಮೂಲಕ ಸಂಘವನ್ನು ಇನ್ನೂ ಉನ್ನತ ಶ್ರೇಣಿಗೆ ಕೊಂಡೊಯ್ಯಬೇಕೆಂದರು.
ಸಂಸ್ಥೆಯ ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ ಮಾತನಾಡಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಶಾಖೆ ತೆರೆಯಲು ಈ ಹಿಂದೆ ಪ್ರಸ್ತಾವಣೆ ಸಲ್ಲಿಸಲಾಗಿದ್ದು ಅನುಮೋದನೆಯೂ ದೊರೆತಿದೆ. ಆದರೆ ಅಧಿಕಾರಿಗಳು ವಿಳಂಭಧೋರಣೆ ಅನುಸರಿಸುತಿದ್ದು ತೀವೃಗತಿಯಲ್ಲಿ ಶಾಖೆ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಸಂಭಂದಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಹದಿನೈದು ದಿನಗಳಲ್ಲಿ ಕಾರ್ಯಗತಗೊಳಿಸುವುದಾಗಿ ತಿಳಿಸಿದರು.
ಇದೇ ಸಂಧರ್ಭದಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಚನ್ನಪ್ಪಾ ಶ್ರೀಶೈಲಪ್ಪ ಬಿಳ್ಳೂರ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಭು ಯಮನವ್ವ ಗೋವಿಂದಗೋಳರನ್ನು ಗೌರವಿಸಲಾಯಿತು.
ಹಿಂದಿನ ಅಧ್ಯಕ್ಷ ಹಣಮಂತ ಬಸಪ್ಪ ನೇಸೂರ, ನಿಂಗಪ್ಪ ಪೂಜಾರಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜೇರಿ, ಆನಂದ ಕವಟಿ, ಪ್ರಕಾಶ ಪಾಟೀಲ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ನಾಗಪ್ಪ ಆಲಕನೂರ, ಹಣಮಂತ ಮಲ್ಲಪ್ಪ ಕೋಳಿ, ಮಹಾಂತೇಶ ಜಾಲಿಕಟ್ಟಿ, ಅವ್ವನಪ್ಪ ಮುಗಳಖೋಡ, ಚನ್ನಪ್ಪ ತೇಲಿ ಸೇರಿದಂತೆ ಹಲವಾರು ಜನ ಪ್ರಮುಖರು, ಪಿಕೆಪಿಎಸ್ ನಿರ್ದೇಶಕರು ರೈತ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಎಂ.ವ್ಹಿ. ವಜ್ಜರಮಟ್ಟಿ ಸ್ವಾಗತಿಸಿ ನಿರೂಪಿಸಿದರು, ಮಹಾಲಿಂಗ ಹಳ್ಳೂರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026
    In ದಿನಪತ್ರಿಕೆ
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.