ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ಅರ್ಜುನಗಿ (ನಿಡೋಣಿ) ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ೧೧೦ ಕೆ.ವಿ, ಬಬಲೇಶ್ವರ-ತಿಕೋಟಾ ಮಾರ್ಗಕ್ಕೆ ಟ್ಯಾಪ್ ಸೇರಿದಂತೆ ೧೧೦/೧೧ಕೆ.ವಿ ಬೇ ಗಳ ನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದ ೧೧೦/೧೧ ಕೆ.ವಿ ಬಬಲೇಶ್ವರ ತಿಕೋಟಾ ಸ್ವೀಕರಣಾ ಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ ಕೆ.ವಿ ವಿದ್ಯುತ್ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಜುಲೈ ೯ರಂದು ಬೆಳಿಗ್ಗೆ ೯ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
