Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಈಗಲೇ ಚುನಾವಣೆ ನಡೆದರೆ ಬಿಜೆಪಿಗೆ 130 ಸ್ಥಾನ ಖಚಿತ
(ರಾಜ್ಯ ) ಜಿಲ್ಲೆ

ಈಗಲೇ ಚುನಾವಣೆ ನಡೆದರೆ ಬಿಜೆಪಿಗೆ 130 ಸ್ಥಾನ ಖಚಿತ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ

ಮೈಸೂರು: ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರದ 11 ವರ್ಷಗಳ ಆಡಳಿತವನ್ನು ಗುರುತಿಸಲು ನಡೆದ ಬಿಜೆಪಿ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವವರೆಗೆ ತಾನು ವಿಶ್ರಮಿಸುವುದಿಲ್ಲ ಎಂದು ಘೋಷಿಸಿದ ಅವರು, ಕೇಂದ್ರದೊಂದಿಗೆ ಸಮನ್ವಯದಿಂದ ಡಬಲ್ ಎಂಜಿನ್ ಸರ್ಕಾರವಾಗಿ ಕೆಲಸ ಮಾಡುವುದಾಗಿ ಹೇಳಿದರು.
ಹಳೇ ಮೈಸೂರು ಪ್ರದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳುವ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೇಳಿದರಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ತಿಳಿಸಿದರು.
ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಕಳಪೆ ಆಡಳಿತದ ಬಗ್ಗೆ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಜನರು ಸರ್ಕಾರವನ್ನು ಶಪಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಉತ್ತಮ ರಸ್ತೆಗಳನ್ನು ಪಡೆಯಲು ಉಚಿತ ಗ್ಯಾರಂಟಿ ಯೋಜನೆಗಳು ಮತ್ತು ಅನ್ನಭಾಗ್ಯ ಅಕ್ಕಿಯನ್ನು ತ್ಯಜಿಸುವಂತೆ ಹೇಳಿರುವ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರನ್ನು ಟೀಕಿಸಿದ ವಿಜಯೇಂದ್ರ, ಜನರ ಗಮನವನ್ನು ಬೇರೆಡೆ ಸೆಳೆಯಲು ಸಿದ್ದರಾಮಯ್ಯ ಕಾಂತರಾಜ್ ಆಯೋಗದ ವರದಿಯನ್ನು ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ರಣದೀಪ್ ಸಿಂಗ್ ಸುರ್ಜೇವಾಲರಿಂದ ನಾಯಕತ್ವಕ್ಕೆ ಅಡಿಪಾಯ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸ್ಪರ್ಧೆಯಿಂದ ಹೊರಬಂದಿದ್ದಾರೆ ಎಂದು ಸುಳಿವು ನೀಡಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದೆ. ರಣದೀಪ್ ಸಿಂಗ್ ಸುರ್ಜೇವಾಲ (ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ) ಪಕ್ಷದ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸುವ ಮೂಲಕ ನಾಯಕತ್ವ ಬದಲಾವಣೆಗೆ ಅಡಿಪಾಯ ಹಾಕಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
“ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸಂಚಾಲಕರನ್ನಾಗಿ ನೇಮಿಸಿ ಅವರನ್ನು ನವದೆಹಲಿಗೆ ಸ್ಥಳಾಂತರಿಸಿದೆ. ಸಿದ್ದರಾಮಯ್ಯ ಅವರ ಸ್ಥಾನವನ್ನು ಬದಲಾಯಿಸಲಾಗುವುದು ಎಂದು ನನಗೆ ವಿಶ್ವಾಸವಿದೆ. ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಮುಂದಿನ ಎರಡು ತಿಂಗಳಲ್ಲಿ ರಾಜೀನಾಮೆ ನೀಡಬೇಕಾಗುತ್ತದೆ” ಎಂದು ವಿಜಯೇಂದ್ರ ಹೇಳಿದರು.

“ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ.”

– ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026
    In ದಿನಪತ್ರಿಕೆ
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.