Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೆಕ್ಕೆಜೋಳಕ್ಕೆ ಕೀಟ ಬಾಧೆ: ನಿಯಂತ್ರಣ ಕ್ರಮಕ್ಕೆ ರೈತರಿಗೆ ಸಲಹೆ
(ರಾಜ್ಯ ) ಜಿಲ್ಲೆ

ಮೆಕ್ಕೆಜೋಳಕ್ಕೆ ಕೀಟ ಬಾಧೆ: ನಿಯಂತ್ರಣ ಕ್ರಮಕ್ಕೆ ರೈತರಿಗೆ ಸಲಹೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಈವರೆಗೆ ೯೨ ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದೆ. ಅಲ್ಲಲ್ಲಿ ಫಾಲ್ ಆರ್ಮಿವರ್ಮ ಕೀಟವು ಕಾಣಿಸಿಕೊಳ್ಳುತ್ತಿದ್ದು, ಮೂಲತಃ ಮೆಕ್ಕೆ ಜೋಳದ ಕೀಟವಾದರೂ ಜೋಳ, ಹತ್ತಿ, ಕಬ್ಬು, ಶೇಂಗಾ ಹಾಗೂ ಇತರೆ ಬೆಳೆಗಳನ್ನು ಬಾಧಿಸುತ್ತಿದೆ. ಕೀಟವು ಮೆಕ್ಕೆಜೋಳದ ಸುಳಿಯಲಿ ಹಗಲುರಾತ್ರಿ ಎಲೆ ಹಾಗೂ ಬೆಳೆ ಹಾನಿ ಮಾಡುತ್ತಿದೆ. ಕೀಟ ನಿಯಂತ್ರಣಕ್ಕೆ ರೈತರು ಸಾಮೂಹಿಕ ಹತೋಟಿ ಕ್ರಮಗಳನ್ನು ಕೈಗೊಳ್ಳಲು ಜಂಟಿ ಕೃಷಿ ನಿರ್ದೇಶಕರು ರೈತರಿಗೆ ಸಲಹೆ ನೀಡಿದ್ದಾರೆ.
ಈ ಕೀಟವು ಕಂದು ಬಣ್ಣದ ಪತಂಗವಾಗಿದ್ದು, ರೆಕ್ಕೆಯ ಅಂಚಿನಲ್ಲಿ ಬಿಳಿಯ ಪಟ್ಟಿಗಳನ್ನು ಹೊಂದಿರುತ್ತದೆ. ಇದರ ಜೀವಿತಾವಧಿ ೩೦ ರಿಂದ ೪೦ ದಿನಗಳಷ್ಟಾಗಿದ್ದು, ಸುಮಾರು ಸಾವಿರ ಮೊಟ್ಟೆಗಳನ್ನು ಇಡುವ ಶಕ್ತಿ ಹೊಂದಿದ್ದು, ೫೦ ರಿಂದ ೧೦೦ ಕಿ.ಮೀ ವರೆಗೆ ವಲಸೆ ಹೋಗುವ ಈ ಕೀಟವು, ತರಕಾರಿ ಬೆಳೆಗಳು, ಭತ್ತ, ಕಬ್ಬು, ಹತ್ತಿ ಹಾಗೂ ಜೋಳದ ಬೆಳೆಗಳನ್ನು ಬಾಧಿಸಬಹುದಾಗಿದೆ. ಇದರ ಮೊಟ್ಟೆ ಹಾಗೂ ಮರಿ ಹುಳುಗಳನ್ನು ಆರಿಸಿ ತೆಗೆಯಬೇಕು. ಮರಿಹುಳು ಕಂಡ ತಕ್ಷಣ ಶೇ.೫ರಷ್ಟು ಬೇವಿನ ಬೀಜದ ಕಷಾಯ ಸಿಂಪಡಿಸಬೇಕು. ಪ್ರತಿ ಲೀಟರ್ ನೀರಿಗೆ ೧.೦ ಮಿ.ಲೀ ಸ್ಪೆöÊನೆಟೋರಾಮ್, ೦.೨೫ಗ್ರಾಂ ಇಮಾಮೆಕ್ಟಿನ್ ಬೆಂಜೋಯೇಟ್, ೧.೮ ರಷ್ಟು ಎಸ್‌ಪಿ, ಅಸಿಫೇಟ್ ಮತ್ತು ಇಮಿಡಾಕ್ಲೋಪ್ರಿಡ್, ೧ ಗ್ರಾಂ ಅಥವಾ ೦.೨೫ ಮಿ.ಲೀರಷ್ಟು ಕ್ಲೊರ‍್ಯಾಂಟ್ರಿನಿಲಿಪ್ರೋಲ್‌ಗಳನ್ನು ಮಿಶ್ರಣ ಮಾಡಿ ಸಿಂಪಡಿಸಬೇಕು. ರಾತ್ರಿ, ತಂಪಾದ ಹೊತ್ತು ಹೆಚ್ಚು ಚಟುವಟಿಕೆಯಿಂದಿರುವ ಕಾರಣ ಕೀಟನಾಶಕದ ಮಿಶ್ರಣವನ್ನು ಬೆಳಿಗ್ಗೆ ಅಥವಾ ಸಾಯಂಕಾಲ ಸಿಂಪಡಿಸುವುದು ಉತ್ತಮ. ೧೦೦ ಮಿ.ಲೀಟರ್ ಮೊನೊಕ್ರೊಟೋಫಾಸ್ ೩೬ ಎಸ್ ಎಲ್, ೧.೫ ಕೆಜಿ ಬೆಲ್ಲ, ೨೦ ಕೆಜಿ ಅಕ್ಕಿತೌಡು ಹಾಗೂ ೩ ಲೀಟರ್ ನೀರು ಬೆರಸಿ ಈ ಮಿಶ್ರಣವನ್ನು ಎರಡು ದಿನ ಕಳಿಯಲು ಬಿಟ್ಟು ಸಂಜೆ ಸಮಯದಲ್ಲಿ ಪ್ರತಿ ಎಕರೆಗೆ ಬೆಳೆಯ ಸುಳಿಯಲ್ಲಿ ಮತ್ತು ಎಲೆಗಳ ಮೇಲೆ ಬೀಳುವಂತೆ ಸಿಂಪರಣೆ ಮಾಡಬೇಕು ಎಂದು ತಿಳಿಸಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಎಸ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.