ಸಿಂದಗಿ: ಮಾನವನ ದೇಹದ ಜೀವಸೆಲೆಯಾದ ರಕ್ತವನ್ನು ದಾನವಾಗಿ ನೀಡುವುದು ಒಂದು ಜೀವವನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ ಎಂದು ಮಕ್ಕಳ ತಜ್ಞ ಡಾ. ಚನ್ನವೀರ (ಮುತ್ತು) ಮನಗೂಳಿ ಹೇಳಿದರು
ಪಟ್ಟಣದ ಕಲ್ಯಾಣ ನಗರದ ನಿವಾಸಿಗಳು ಈದ್-ಮಿಲಾದ್ ನಿಮಿತ್ಯ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ರಕ್ತದಾನ ಅತ್ಯಂತ ಪವಿತ್ರವಾದ ದಾನ. ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ. ಆ ಕಾರಣದಿಂದಲೇ ರಕ್ತದಾನವನ್ನು ಜೀವದಾನ ಎಂದು ಕರೆಯಲಾಗುತ್ತದೆ ಎಂದರು.
ಈ ವೇಳೆ ರಕ್ತನಿಧಿ ಪ್ರಯೋಗಾಲಯ ಅಧಿಕಾರಿ ರಾಜಶೇಖರ ನರಗೋದಿ, ಶಿವನಗೌಡ ಬಿರಾದಾರ, ವಕೀಲರ ಸಂಘದ ಅಧ್ಯಕ್ಷ ಎಸ್.ಬಿ ದೊಡಮನಿ ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲದ ಕಾರಣ ಅಗತ್ಯದ ಮತ್ತು ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರಕ್ತದಾನಿಗಳ ರಕ್ತವನ್ನೇ ರೋಗಿಗಳು ಅವಲಂಬಿಸಿರುತ್ತಾರೆ. ದಿನದ ಪ್ರತಿಕ್ಷಣವೂ ದೇಶದ ಯಾವುದಾದರೂ ಭಾಗದಲ್ಲಿ ಯಾರೊಬ್ಬರಿಗಾದರೂ ರಕ್ತದ ಆವಶ್ಯಕತೆ ಇರುತ್ತದೆ. ವ್ಯಕ್ತಿಯು ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಲೇಬೇಕು. ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ ಎಂದು ಭಾವಿಸಿ ಆಗಾಗ ರಕ್ತದಾನ ಮಾಡಿದಲ್ಲಿ ಒಂದು ಜೀವ ಉಳಿಸಿದ ಪುಣ್ಯ ನಿಮಗೆ ತಟ್ಟುತ್ತದೆ ಎಂದು ಹೇಳಿದರು.
ಈ ವೇಳೆ ರಕ್ತ ನಿಧಿ ಭಂಡಾರದ ವೈದ್ಯಾಧಿಕಾರಿ ಡಾ.ಸೃಷ್ಟಿ, ಪ್ರಯೋಗಾಲಯ ಅಧಿಕಾರಿ ಬಿ.ಬಿ ಕತೀಜಾ ಮೈಸೂರ್ ಸೇರಿದಂತೆ ಕಲ್ಯಾಣ ನಗರದ ನಿವಾಸಿಗಳು ಮತ್ತು ಸ್ವಯಂ ಪ್ರೇರಿತವಾಗಿ ಬಂದಂತಹ ರಕ್ತದಾನಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment