Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾವೆಲ್ಲ ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡಬೇಕು
(ರಾಜ್ಯ ) ಜಿಲ್ಲೆ

ನಾವೆಲ್ಲ ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ.ಎ ಸಲಹೆ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಊರು ಬದಲಾವಣೆಯಾದರೆ ಸಾಲದು ಅದರ ಜೊತೆಗೆ ವ್ಯವಸ್ಥೆ ಕೂಡ ಬದಲಾವಣೆಯಾಗಬೇಕು ಎಂದು ವಿಜಯಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಹೇಳಿದರು.
ಪಟ್ಟಣದ ನ್ಯಾಯಾಲಯಕ್ಕೆ ಇಲ್ಲಿನ ನ್ಯಾಯವಾದಿಗಳ ಸಂಘದ ಆವ್ಹಾನದ ಮೇರೆಗೆ ಭೇಟಿ ನೀಡಿ, ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕಾನೂನು ಮತ್ತು ಸಂವಿಧಾನದ ಮೌಲ್ಯಗಳನ್ನು ತಿಳಿದವರು ನಾವೆಲ್ಲ ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡಬೇಕು ಎಂದು ವಕೀಲರಿಗೆ ಸಲಹೆ ನೀಡುತ್ತ, ಇಲ್ಲಿನ ಸಿವಿಲ್ ನ್ಯಾಯಾಲಯದಲ್ಲಿ ಹೆಚ್ಚು ಪ್ರಕರಣಗಳು ಬಾಕಿ ಇರುವದರಿಂದ ಹೆಚ್ಚುವರಿ ನ್ಯಾಯಾಲಯದ ಬೇಡಿಕೆ ಸಂಘದಿಂದ ಬಂದಿದ್ದರಿಂದ ಈ ಪ್ರಸ್ತಾವನೆಯನ್ನು ಉಚ್ಛ ನ್ಯಾಯಾಲಯಕ್ಕೆ ರವಾನಿಸಿದ್ದೇನೆ. ಜು೧೨ ರಂದು ರಾಷ್ಟ್ರೀಯ ಲೋಕ್‌ಅದಾಲತ್ ಆಯೋಜಿಸಿದ್ದರಿಂದ ಹೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಎಲ್ಲ ವಕೀಲರಲ್ಲಿ ವಿನಂತಿಸುವದಾಗಿ ತಿಳಿಸಿದರು.
೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಮಾತನಾಡಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಭೇಟಿ ಖುಷಿ ನೀಡುವುದರ ಜೊತೆಗೆ ನಮ್ಮ ಭರವಸೆಗಳು ಈಡೇರುವ ವಿಶ್ವಾಸ ಮೂಡಿದೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ, ಮುದ್ದೇಬಿಹಾಳ, ನಿಡಗುಂದಿ ಮತ್ತು ತಾಳಿಕೋಟೆ ಭಾಗದ ವಿಶೇಷ (ಫೋಸ್ಕೋ ಮತ್ತು ಅಟ್ರಾಸಿಟಿ) ಪ್ರಕರಣಗಳು ಪಟ್ಟಣದ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸೇರ್ಪಡೆಗೊಳಿಸುವಂತೆ, ನ್ಯಾಯಾಲಯದ ಕ್ಯಾಂಟೀನ್ ಟೆಂಡರ್ ಪ್ರಕ್ರೀಯೆ ಕೈಗೊಳ್ಳುವಂತೆ ಮತ್ತು ಪಟ್ಟಣದ ಹಳೆಯ ನ್ಯಾಯಾಲಯದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು ಅದನ್ನು ಸುವ್ಯವಸ್ಥಿತವಾಗಿಟ್ಟುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡರು.
ಈ ವೇಳೆ ಸಂಘದ ವತಿಯಿಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳೂ ಹಾಗೂ ಸಿವಿಲ್ ನ್ಯಾಯಾಧೀಶರಾದ ರಾಮಮೂರ್ತಿ ಎನ್, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ, ಹಿರಿಯ ನ್ಯಾಯವಾದಿಗಳಾದ ಎಂ.ಎಚ್.ಹಾಲಣ್ಣನವರ, ಎಂ.ಎ.ಮುದ್ದೇಬಿಹಾಳ, ಎಸ್.ಆರ್.ಸಜ್ಜನ, ಎಂ.ಎಚ್.ಕ್ವಾರಿ, ಎಸ್.ಬಿ.ಬಾಚಿಹಾಳ, ಸಂಗಮೇಶ ಹೂಗಾರ, ಎನ್.ಜಿ.ಕುಲಕರ್ಣಿ, ವಿ.ಜಿ.ಮದರಕಲ್ಲ ನ್ಯಾಯವಾದಿಗಳಾದ ಎಂ.ಆರ್.ಪಾಟೀಲ, ಎಚ್.ಟಿ.ಪೂಜಾರಿ, ಎಸ್.ಎಂ.ಕಿಣಗಿ, ಚೇತನ ಶಿವಶಿಂಪಿ, ಎಸ್.ಆರ್.ಜೋಗಿ, ಬಿ.ಎ.ಚಿನಿವಾರ, ಎನ್.ಬಿ.ಮುದ್ನಾಳ, ಎಂ.ಎಲ್.ರಿಸಾಲದಾರ, ಎಚ್.ಎಚ್.ಬಡಿಗೇರ, ಬುಡ್ಡಾ ನಾಲತವಾಡ, ಎನ್.ಆಯ್.ಕೇಸಾಪೂರ, ಆರ್.ಎನ್.ಢವಳಗಿ, ಆರ್.ಎನ್.ದೊಡಮನಿ, ಯಾಸೀನ ಬಿದರಕುಂದಿ, ಶ್ರೀದೇವಿ ರಾಜೂರ, ಹಸೀನಾ ಅನಂತಪೂರ, ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ನ್ಯಾಯಾಲಯದ ಸಿಬ್ಬಂದಿಗಳಾದ ವಾಯ್.ಎಂ.ತಳವಾರ, ಸುರೇಶ ಬಳಗಾನೂರ, ನಾಗೇಶ ಮದಿಹಳ್ಳಿ, ಇಸಾಕ ಒಂಟಿ ಸೇರಿದಂತೆ ಮತ್ತೀತರರು ಇದ್ದರು.
ಹಿರಿಯ ನ್ಯಾಯವಾದಿ ಪರಿಚಯಿಸಿದರು. ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ ನಿರ್ವಹಿಸಿದರು.

“ಪ್ರಕರಣಗಳನ್ನು ಕಡ್ಡಾಯವಾಗಿ ರಾಜೀ ಸಂಧಾನಕ್ಕಾಗಿ ಮಧ್ಯಸ್ಥಿಕೆಗೆ ಕಳುಹಿಸಿಕೊಡಲು ಸರ್ವೋಚ್ಛ ನ್ಯಾಯಾಲಯದ ಆದೇಶವಾಗಿರುವದರಿಂದ ಹೊಸ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ಕಳುಹಿಸಿಕೊಡಲು ಎಲ್ಲ ನ್ಯಾಯವಾದಿಗಳ ಸಹಕಾರ ಕೋರುವೆ.

– ಹರೀಶ ಎ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ವಿಜಯಪುರ

“ಲೋಕ್‌ಅದಾಲತ್‌ನಲ್ಲಿ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸುವಲ್ಲಿ ನಮ್ಮ ಸಂಘ ಜಿಲ್ಲೆಗೆ ಸತತ ಮೂರನೇ ಸ್ಥಾನ ಪಡೆದಿದೆ. ಬರುವ ಲೋಕ್ ಅದಾಲತ್‌ನಲ್ಲಿ ಈ ಬಾರಿಯೂ ಪ್ರಥಮ ಸ್ಥಾನ ಪಡೆಯುವ ಭರವಸೆಯನ್ನು ಸಂಘದ ಎಲ್ಲ ಸದಸ್ಯರ ಪರವಾಗಿ ನೀಡುವೆ.”

– ಶಶಿಕಾಂತ ಮಾಲಗತ್ತಿ
ನ್ಯಾಯವಾದಿಗಳ ಸಂಘದ ಅಧ್ಯಕ್ಷ, ಮುದ್ದೇಬಿಹಾಳ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.