ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮೀಣ ಯುವ ಜನತೆಯ ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವ ವಾತಾವರಣವನ್ನು ಕಲ್ಪಿಸಲು ಪ್ರಸಕ್ತ ಸಾಲಿನಲ್ಲಿ ಯುವ ಚೈತನ್ಯ ಯೋಜನೆಯಡಿ ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ಶೇ.೭೦ರಷ್ಟು ಹಾಗೂ ನಗರ ಪ್ರದೇಶದ ಶೇ.೩೦ರಷ್ಟು ಜಿಲ್ಲೆಯಲ್ಲಿ ಸಕ್ರಿಯವಾಗಿರುವ ನಾಲ್ಕು ಯುವ ಸಂಘ ಆಯ್ಕೆ ಮಾಡಲಾಗುತ್ತದೆ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಣಿಯಾಗಿರುವ ಸಂಘಗಗಳು ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಜುಲೈ ೨೨ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೫೧೦೮೫ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.