ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜ್ಞಾನಯೋಗಾಶ್ರಮದಲ್ಲಿ ಜುಲೈ ೧೦ರಂದು ಜರುಗಲಿರುವ ಪರಮಪೂಜ್ಯ ಶ್ರೀ ಮಲ್ಲಿಕಾರ್ಜುನ ಮಹಾಶಿವಯೋಗಿಗಳವರ ಸ್ಮರಣೋತ್ಸವ ಹಾಗೂ ಗುರುಪೂರ್ಣಿಮಾ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ದಿನಾಂಕ:೦೯-೦೭-೨೦೨೫ ರಿಂದ ೧೦-೦೭-೨೦೨೫ರವರೆಗೆ ನಗರದ ವಿವಿಧ ಬಡಾವಣೆ, ಕೇಂದ್ರ ಬಸ್ ನಿಲ್ದಾಣ ಹಾಗೂ ಸೆಟ್‌ಲೈಟ್ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಚರಣೆ ಮಾಡಲಿವೆ. ಪ್ರಯಾಣಿಕರು ಸದರಿ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗೀಯ ನಿಯಂತ್ರಣಾಧೀಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.