ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಕಾನೂನು ಪದವೀಧರರು sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ನಮೂನೆ, ಅಗತ್ಯ ದಾಖಲೆ ಸಹಿತ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರ ಪ್ರಕಟಣೆ ತಿಳಿಸಿದೆ.
