ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ೨೦೧೬ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಜು.೦೯ರಂದು ಅಧಿಕಾರ ಸ್ವೀಕರಿಸಿದರು.
ವಿಜಯಪುರ ನಿರ್ಗಮಿತ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಬರ ಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಬುಧವಾರ ಅಧಿಕಾರ ಹಸ್ತಾಂತರಿಸಿದರು.
ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವೈದ್ಯಕೀಯ ಪದವಿ ಪಡೆದಿರುವ ಇವರು, ಕಳೆದ ೨ ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದ್ದಾರೆ.
ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ, ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ತದನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಗಳಾಗಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಗಳಾಗಿ ಹಾಗೂ ಜಿಲ್ಲೆಯ ಇಂಡಿ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

