Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ

ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ಕರವೇ ಆಗ್ರಹ
(ರಾಜ್ಯ ) ಜಿಲ್ಲೆ

ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ಕರವೇ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ ಮಾತನಾಡಿ, ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡವನ್ನು, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ. ಮಾತ್ರವಲ್ಲ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ. ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ. ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು. ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸಂಚಾಲಕ ಸಂತೋಷ ಪಾಟೀಲ ಡಂಬಳ ಮಾತನಾಡಿ, ತಮಿಳುನಾಡು 1968ರಿಂದಲೇ ತ್ರಿಭಾಷಾ ನೀತಿಯನ್ನು ತಿರಸ್ಕರಿಸಿ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿದೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಪೂರ್ತಿ ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿದರು.
ಈ ವೇಳೆ ರಾವಜಿ, ರಾಜು ಕಂಬಾಗಿ, ರವಿ ಕಿತ್ತೂರ, ದಸ್ತಗೀರ ಸಾಲೋಟಗಿ, ಫಯಾಜ ಕಲಾದಗಿ, ಮುತ್ತು ಹಿರೇಮಠ, ಜೈಭೀಮ ಮುತ್ತಗಿ, ಅನುರಾಧಾ ಕಲಾಲ, ಕಸ್ತೂರಿ ಪೂಜಾರಿ, ಶ್ರೀಕಾಂತ ಬಿಜಾಪುರ, ಎಚ್.ಎಸ್.ಕಬಾಡೆ, ಸಾಧಿಕ ಜಾನ್ವೇಕರ, ದಾದಾಪೀರ ಮುಜಾವರ, ಆಸೀಫಪೀರವಾಲೆ, ದಯಾನಂದ ಸಾವಳಗಿ, ವಿನೋದ ದಳವಾಯಿ, ಮಲ್ಲನಗೌಡ ಪಾಟೀಲ, ಬಸವರಾಜ ಬಿ.ಕೆ., ವಿಜಯಕುಮಾರ ಯಂಭತನಾಳ, ಮಂಜುನಾಥ ಹಿರೇಮಠ, ನಿಸಾರ ಬೇಪಾರಿ, ಹಣಮಂತ ಟಕ್ಕಳಕಿ, ತಾಜೋದ್ದೀನ ಕಲೀಫಾ, ಅಮೀನ ಅಗಸಿಮನಿ, ಕವಿತಾ ಸಾವಳಗಿ, ಐ.ಸಿ.ಪಠಾಣ, ರಾಜು ಇಜೇರಿ, ಮೊಹ್ಮದ ಮುಲ್ಲಾ, ಇಮ್ತಿಯಾಜ ಮುಲ್ಲಾ, ಪಿದಾ ಕಲಾದಗಿ, ಬಸಲಿಂಗ ಮಡಿವಾಳ, ಭರತ ಚಿಬಲಿ, ಆನಂದ ಬಿರಾದಾರ, ಮನೋಹರ ತಾಜವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ

ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ

ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು
    In (ರಾಜ್ಯ ) ಜಿಲ್ಲೆ
  • ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ
    In (ರಾಜ್ಯ ) ಜಿಲ್ಲೆ
  • ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ
    In (ರಾಜ್ಯ ) ಜಿಲ್ಲೆ
  • ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!
    In (ರಾಜ್ಯ ) ಜಿಲ್ಲೆ
  • ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ
    In (ರಾಜ್ಯ ) ಜಿಲ್ಲೆ
  • ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ಯಾದಗೀರ ರೈಲ್ವೇ‌ ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಾಂಪೌಂಡನ್ನೇ ನುಂಗಿದ ಪವಾಡ ಪುರುಷರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.