ಇಂಡಿಯಲ್ಲಿ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ & ಲೋಕಾರ್ಪಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ ವತಿಯಿಂದ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಸಮಾರಂಭ ಜುಲೈ ೧೪ರಂದು ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಉಪಸ್ಥಿತರಿರಲಿದ್ದು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.