Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಸಮಾಜವಾದದ ಜನಕ ಜಯಪ್ರಕಾಶ ನಾರಾಯಣ

ಧನಾತ್ಮಕತೆ ಹೀಗಿರಬೇಕು..!!

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 15,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಕರ್ನಾಟಕ ಸಂಪೂರ್ಣ ಬಂದ್!
(ರಾಜ್ಯ ) ಜಿಲ್ಲೆ

ಇಂದು ಕರ್ನಾಟಕ ಸಂಪೂರ್ಣ ಬಂದ್!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಂದ್ ಗೆ ಭಾರಿ ಬೆಂಬಲ ವ್ಯಕ್ತ | ಜನಜೀವನ ಅಸ್ತವ್ಯಸ್ತ ಸಾಧ್ಯತೆ | ಬಿಜೆಪಿ-ಜೆಡಿಎಸ್ ಬೆಂಬಲ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬರಗಾಲ ಇರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಸೆ. 29 ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆಯುತ್ತಿರುವ ಬಂದ್‌ನಲ್ಲಿ ಪಾಲ್ಗೊಳ್ಳಲು ಹಲವು ಸಂಘಟನೆಗಳು ಮುಂದೆ ಬಂದು ಬೆಂಬಲ ಸೂಚಿಸಿವೆ. ರಾಜ್ಯದ ನಾನಾ ಭಾಗಗಳಲ್ಲಿರುವ ಸ್ಥಳೀಯ ಸಂಘಟನೆಗಳು ಕೂಡಾ ಕೈಜೋಡಿಸಿವೆ. ಇದರಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಂದ್ ಯಶಸ್ವಿಯಾಗುವ ಲಕ್ಷಣಗಳು ಕಾಣುತ್ತಿವೆ.
ಜನಜೀವನ ಅಸ್ತವ್ಯಸ್ತ ಸಾಧ್ಯತೆ: ಕರ್ನಾಟಕ ಬಂದ್ ನಿಂದ ವಿಶೇಷವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.
ನಗರದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಎಲ್ಲ ವರ್ಗದ ಜನರು ಭಾಗವಹಿಸುವ ಸಾಧ್ಯತೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ. ರಾಜ್ಯದ ಹೆದ್ದಾರಿಗಳು, ಟೋಲ್ ಗೇಟ್‌ಗಳು, ರೈಲು ಸೇವೆಗಳು ಮತ್ತು ವಿಮಾನ ನಿಲ್ದಾಣಗಳನ್ನು ಮುಚ್ಚಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸಹ ಬಂದ್‌ಗೆ ಬೆಂಬಲ ನೀಡಿದ್ದು, ಕರ್ನಾಟಕದ ಹೋಟೆಲ್‌ಗಳು, ಆಟೋರಿಕ್ಷಾಗಳು ಬಂದ್‌ಗೆ ಬೆಂಬಲ ನೀಡಿವೆ.
ಆಟೋರಿಕ್ಷಾ ಚಾಲಕರ ಒಕ್ಕೂಟ ಮತ್ತು ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘ (OUDOA) ಬಂದ್‌ಗೆ ಬೆಂಬಲ ನೀಡುತ್ತಿದೆ. ನಾವು ನಾಳೆ ನಾಯಂಡಹಳ್ಳಿಯಿಂದ ಫ್ರೀಡಂ ಪಾರ್ಕ್‌ವರೆಗೆ ರ್ಯಾಲಿ ನಡೆಸುತ್ತೇವೆ ಎಂದು ಅದರ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಿದೆ.
ರಾಜ್ಯ ಸಾರಿಗೆ ಇಲಾಖೆಯು ತಮ್ಮ ಸೇವೆಗಳನ್ನು ಎಂದಿನಂತೆ ಮುಂದುವರಿಸಲು ರಾಜ್ಯ ಸಾರಿಗೆ ನಿಗಮಗಳಿಗೆ ನಿರ್ದೇಶನ ನೀಡಿದೆ. ಕರ್ನಾಟಕದ ಉತ್ತರ ಭಾಗದ ಬಳ್ಳಾರಿ, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ಯಾದಗಿರಿ, ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ದಾವಣಗೆರೆಯ ರೈತರು ಮತ್ತು ವರ್ತಕರು ಬಂದ್‌ಗೆ ತಮ್ಮ ನೈತಿಕ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಆದರೆ ಬಂದ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ ಬಂದ್​ಗೆ ನೈತಿಕ ಬೆಂಬಲ ನೀಡಲು ಶಾಲೆಗಳು ಮುಂದಾಗಿವೆ. ಶಾಲೆಗಳಿಗೆ ರಜೆ ನೀಡುವ ಜವಾಬ್ದಾರಿಯನ್ನು ಆಯಾ ಆಡಳಿತ ಮಂಡಳಿ ತಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಶಾಲೆಗಳ ರಜೆ ನೀಡುವ ಬಗ್ಗೆ ನಿರ್ಧಾರಕ್ಕೆ ಮನವಿ ನೀಡಲಾಗಿದೆ ಎಂದು ರೂಪ್ಸಾ ಖಾಸಗಿ ಶಾಲೆಗಳ ಸಂಘಟನೆಯ ಲೋಕೇಶ್ ತಾಳಿಕಟ್ಟೆ ಮನವಿ ಮಾಡಿದ್ದಾರೆ.
ಬೀದಿ ಬದಿ ವ್ಯಾಪಾರಿಗಳು ಕೂಡ ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಬೆಳಗ್ಗೆ 6 ರಿಂದ ಸಂಜೆ 6 ವರೆಗೂ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ಥಳೀಯ ಮಾರ್ಕೆಟ್ ಬೀದಿ ಬದಿ ವ್ಯಾಪಾರಗಳು ಸಂಪೂರ್ಣ ಸ್ಥಗಿತವಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.ಅಗತ್ಯ ಸೇವೆಗಳಾದ ಮೆಡಿಕಲ್, ಆಸ್ಪತ್ರೆ, ಆಂಬ್ಯುಲೆನ್ಸ್, ಹಾಲಿನ ಬೂತ್ ಗಳು ನಾಳೆ ಎಂದಿನಂತೆ ತೆರೆದಿರುತ್ತವೆ.

BIJAPUR NEWS public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಾರತೀಯ ಸಮಾಜವಾದದ ಜನಕ ಜಯಪ್ರಕಾಶ ನಾರಾಯಣ

ಧನಾತ್ಮಕತೆ ಹೀಗಿರಬೇಕು..!!

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 15,2026

ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾರತೀಯ ಸಮಾಜವಾದದ ಜನಕ ಜಯಪ್ರಕಾಶ ನಾರಾಯಣ
    In ವಿಶೇಷ ಲೇಖನ
  • ಧನಾತ್ಮಕತೆ ಹೀಗಿರಬೇಕು..!!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 15,2026
    In ದಿನಪತ್ರಿಕೆ
  • ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ
    In (ರಾಜ್ಯ ) ಜಿಲ್ಲೆ
  • ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.