ಯಡ್ರಾಮಿಯಲ್ಲಿ ಲಿಂ.ಸಿದ್ಧರಾಮ ಮಹಾಸ್ವಾಮಿಗಳ 4ನೇ ಪುಣ್ಯಾರಾಧನೆ
ಉದಯರಶ್ಮಿ ದಿನಪತ್ರಿಕೆ
ಯಡ್ರಾಮಿ: ಪಟ್ಟಣದ ಶ್ರೀ ಮುರಘೇಂದ್ರ ಶಿವಯೋಗಿ ವಿರಕ್ತಮಠದ ಲಿಂ.ಪೂಜ್ಯ ಸಿದ್ಧರಾಮ ಮಹಾಸ್ವಾಮಿಗಳ 4ನೇ ಪುಣ್ಯಾರಾಧನೆ ಕಾರ್ಯಕ್ರಮ ರವಿವಾರ ಜು.13ರಂದು ಜರುಗಲಿದೆ ಎಂದು ಶ್ರೀಮಠದ ಸದ್ಭಕ್ತ ಮಂಡಳಿ ತಿಳಿಸಿದೆ.
ಮಠದ ಪ್ರಸ್ತುತ ಪೀಠಾಧಿಪತಿ ಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮಿಗಳ ನೇತೃತ್ವದಲ್ಲಿ ರವಿವಾರ ಬೆಳಿಗ್ಗೆ ಲಿಂ. ಸಿದ್ಧರಾಮ ಮಹಾಸ್ವಾಮಿಗಳ ಕತೃ ಗದ್ದುಗೆಗೆ ಮಹಾ ರುದ್ರಾಭಿಷೇಕ , ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮ ನೆರವೇರಲಿದೆ. 10 ಗಂಟೆಗೆ ಉಚಿತ ಆರೋಗ್ಯ, ನೇತ್ರ ತಪಾಸಣೆ, ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ, ರಕ್ತದೊತ್ತಡ ಹಾಗೂ ರಕ್ತದಾನ ಶಿಬಿರ ಶ್ರೀಮಠದ ಆವರಣದಲ್ಲಿ ನಡೆಯಲಿದೆ.
ಶ್ರೀ ಮುರಘೇಂದ್ರ ಶಿವಯೋಗಿ ಫೌಂಡೇಶನ್ ಹಾಗೂ ಜೇವರ್ಗಿ, ಯಡ್ರಾಮಿ ತಾಲೂಕು ಆರೋಗ್ಯ ಸಮುದಾಯ ಕೇಂದ್ರ, ತಾಲೂಕು ಖಾಸಗಿ ವೈದ್ಯರ ಸಂಘ, ಕಲಬುರಗಿ ಬಿಲ್ವ ಆಸ್ಪತ್ರೆ, ತಾಲೂಕು ಮೆಡಿಕಲ್ ಅಸೋಸಿಯೇಶನ್, ಅನುಗ್ರಹ ಕಣ್ಣಿನ ಆಸ್ಪತ್ರೆ, ತಾಲೂಕು ವಿವಿಧ ಸಂಘಟನೆಗಳು ಹಾಗೂ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಸಹಯೋಗದಲ್ಲಿ ಆರೋಗ್ಯ ಶಿಬಿರ ಜರುಗಲಿದೆ. ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರು ಕೃಪೆಗೆ ಪಾತ್ರರಾಗಿ, ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸದ್ಭಕ್ತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.