Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಗೆ ಆಗ್ರಹಿಸಿ ಪ್ರತಿಭಟನೆ

ಹತ್ಯಾಚಾರಿಗಳ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಮನವಿ

ಸಾಧನೆಗೆ ಸಮಸ್ಯೆಗಳು ಅಡ್ಡಿಯಾಗದಿರಲಿ :ಅರಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಗೆ ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಗೆ ಆಗ್ರಹಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಯನ್ನು ರೂಪಿಸಿ(ರಕ್ಷಣೆ ಹಾಗೂ ದೌರ್ಜನ್ಯ ತಡೆ) ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕುರಿಗಾಹಿಗಳು ಹಾಗೂ ಮುಖಂಡರು ನಗರದ ದೇಸಾಯಿ ವೃತ್ತದಿಂದ ಕುರಿಗಳ ಜೊತೆಗೆ ತಾಲ್ಲೂಕು ಆಡಳಿತ ಸೌಧದವರೆಗೆ ಪ್ರತಿಭಟಣೆ ಮೂಲಕ ಹೋಗಿ ತಹಶೀಲ್ದಾರ ಸದಾಶಿವ ಮಕ್ಕೋಜಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮುಖಂಡ ಅರ್ಜುನ ದಳವಾಯಿ ಮಾತನಾಡಿ, ಕುರಿಗಾರರ ಮೇಲೆ ನಿರಂತವಾಗಿ ನಡೆಯುತ್ತಿರುವ ದೌರ್ಜನ್ಯಗಳು, ಹಲ್ಲೆ, ಜೀವ ಬೇದರಿಕೆ, ಕೊಲೆ, ಅತ್ಯಾಚಾರ, ಕುರಿ ಕಳ್ಳತನ, ಅರಣ್ಯಾಧಿಕಾರಿಗಳ ಲಂಚದ ಬೇಡಿಕೆ ಅಧಿಕ ಪ್ರಮಾಣದಲ್ಲಿ ನಡೆಯುತ್ತಿವೆ. ಸರ್ಕಾರವು ಎಲ್ಲ ವರ್ಗದ ಮಹಿಳೆಯರ ಪರ, ಮಕ್ಕಳ ಪರ, ಶೋಷಿತ ಸಮುದಾಯಗಳ ಪರ ಹಾಗೂ ವಿವಿಧ ವೃತ್ತಿಪರರ ಹಿತರಕ್ಷಣೆಗೆ ವಿಶೇಷ ಕಾಯ್ದೆಗಳನ್ನು ಜಾರಿ ಮಾಡಿ ಅವರ ರಕ್ಷಣೆ ಮಾಡಬೇಕು ಎಂದರು.
ಹೂವಪ್ಪ ಉಷಾಕರ ಮಾತನಾಡಿ, ಗುಡ್ಡುಗಾಡು ಪ್ರದೇಶಗಳಲ್ಲಿ ಕುರಿ ಮೇಯಿಸಲು ಹೋದಾಗ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಹಾಗೂ ಸಿಬ್ಬಂದಿಗಳಿಂದ ನಿರಂತರ ಕಿರುಕುಳ, ದೌರ್ಜನ್ಯಗಳು ನಡೆಯುತ್ತಿವೆ, ಕುರಿಗಾರಿಕೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿ ನಿಭಾಯಿಸುವ ಸಾಂಪ್ರದಾಯಿಕ ಕುಲ ಕಸಬಾಗಿದೆ, ಬೆಟ್ಟ-ಗುಡ್ಡಗಳನ್ನು ಒಳಗೊಂಡಂತೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯವಾಗಿ ಹಾಗೂ ಸಂಚರಿಸುವ ಮೂಲಕ ಪಾಲನೆ ಮಾಡುತ್ತಿದ್ದು, ಬಡವರ ಪಾಲಿಗೆ ಕುರಿಗಾರಿಕೆ ವರದಾನವಾಗಿರುತ್ತದೆ ಎಂದರು.
ಮುಖಂಡ ಯಲ್ಲಪ್ಪ ಹೆಗಡೆ ಮಾತನಾಡಿ ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಉಗಲವಾಟ ಗ್ರಾಮದ ಕುರಿಗಾಯಿ ಶರಣಪ್ಪ ಚಿಮ್ಮನಕಟ್ಟಿ, ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲ್ಲೂಕಿನ ಕುರಿಗಾಯಿ ಪ್ರಭು ಮೇತ್ರಿ ಇವರನ್ನು ಕುರಿಗಳ್ಳರು ಕೊಲೆ ಮಾಡಿದ್ದು ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನಲ್ಲಿ ಲಕ್ಷ್ಮೀ ಕಳ್ಳಮನಿ ಎಂಬ ಕುರಿಗಾಯಿ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ನಿದರ್ಶನಗಳು ನಮ್ಮ ಮುಂದಿವೆ ಎಂದರು.ಮಲ್ಲಿಕಾರ್ಜುನ ಬೆಕ್ಕೇರಿ, ಹಣಮಂತ ಯಮಗಾರ, ನಾಗಪ್ಪ ಹೆಗಡೆ, ಸಂತೋಷ ಮಮದಾಪೂರ, ಹಣಮಂತ ಮಗದೂಮ್, ಪರಶು ಚಿಗರಿ, ಪ್ರಲ್ಹಾದ ಭಜಂತ್ರಿ, ರಾಜು ನದಾಪ್ ಸೇರಿದಂತೆ ಇತರರು ಇದ್ದರು.

ಕುರಿಗಾಹಿಗಳಿಗೆ ಸರ್ಕಾರ ಅನುಕೂಲ ಮಾಡಲಿ

ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಕುರಿ ಕಾಯಲು ಕುರಿಗಾಹಿಗಳಿಗೆ ಸರ್ಕಾರ ಅನುಕೂಲ ಮಾಡಬೇಕು, ಅರಣ್ಯ ಪ್ರದೇಶದಲ್ಲಿ ಬಿಟ್ಟರೆ ಅರಣ್ಯ ಇಲಾಖೆಯವರು ತೊಂದರೆ ಮಾಡುತ್ತಿದ್ದಾರೆ, ಆದ್ದರಿಂದ ಸರ್ಕಾರ ಶಾಶ್ವತ ಪರಿಹಾರವನ್ನು ಮಾಡಬೇಕು, ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆಯವರ ಜೊತೆ ಮಾತನಾಡಿ ಶಾಶ್ವತ ಪರಿಹಾರಕ್ಕೆ ಮನವಿ ಮಾಡಲಾಗುವದು, ಸ್ಥಳಿಯ ಸಮಸ್ಯೆಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಲಾಗುವದು ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹತ್ಯಾಚಾರಿಗಳ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಮನವಿ

ಸಾಧನೆಗೆ ಸಮಸ್ಯೆಗಳು ಅಡ್ಡಿಯಾಗದಿರಲಿ :ಅರಳಿ

ಹೊಸತನಕ್ಕೆ ನಾಂದಿ ಹಾಡಿದ ಶ್ರೀಮಠ :ಅಂಗಡಿ

ವಿರಕ್ತಮಠದಲ್ಲಿ ಜು.13ರಂದು ಆರೋಗ್ಯ ಉಚಿತ ತಪಾಸಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಹತ್ಯಾಚಾರಿಗಳ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಸಮಸ್ಯೆಗಳು ಅಡ್ಡಿಯಾಗದಿರಲಿ :ಅರಳಿ
    In (ರಾಜ್ಯ ) ಜಿಲ್ಲೆ
  • ಹೊಸತನಕ್ಕೆ ನಾಂದಿ ಹಾಡಿದ ಶ್ರೀಮಠ :ಅಂಗಡಿ
    In (ರಾಜ್ಯ ) ಜಿಲ್ಲೆ
  • ವಿರಕ್ತಮಠದಲ್ಲಿ ಜು.13ರಂದು ಆರೋಗ್ಯ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಧರಣಿ ಹೋರಾಟ ಕೈಬಿಡಲು ಮನವೊಲಿಸಿದ ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಮುಷ್ಕರಕ್ಕೆ ಬಿಜೆಪಿ ಬೆಂಬಲ
    In (ರಾಜ್ಯ ) ಜಿಲ್ಲೆ
  • ಸಮುದಾಯ ಭವನ ನಿರ್ಮಾಣಕ್ಕೆ ರೂ.70 ಲಕ್ಷ ಮಂಜೂರು
    In (ರಾಜ್ಯ ) ಜಿಲ್ಲೆ
  • ಜನಸಂಖ್ಯೆ ಮಿತಿಮೀರಿದರೆ ದೇಶದ ಅಭಿವೃದ್ಧಿಗೆ ಮಾರಕ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ಸಿಎಂ ಮತ್ತು ಡಿಸಿಎಂ ಇಂಡಿಗೆ ಆಗಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.