ವಿಜಯಪುರ: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಜಯಂತಿ ಅಂಗವಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅಕ್ಟೋಬರ್ ೨ರಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯರಾತ್ರಿ ೧೨ ಗಂಟೆವರೆಗೆ ಸಾರಾಯಿ ಹಾಗೂ ಐಎಂಎಲ್ ಅಂಗಡಿಗಳಲ್ಲಿ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.