Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ
(ರಾಜ್ಯ ) ಜಿಲ್ಲೆ

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಗಳ ಶಂಕುಸ್ಥಾಪನೆ & ಉದ್ಘಾಟನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
4157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ. ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಸಾರ್ವಜನಿಕ‌ವಾಗಿ ದಾಖಲೆ ಸಮೇತ ಚರ್ಚೆ ನಡೆಸೋಣ. ಜನರೇ ತೀರ್ಮಾನಿಸಲಿ ಎಂದು ನುಡಿದರು.
ಬಿಜಾಪುರ ಜಿಲ್ಲೆ ಮೊದಲು ಹೇಗಿತ್ತು? ನಮ್ಮ ಸರ್ಕಾರದಲ್ಲಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ಕೈಯಲ್ಲಿ ಹಿಡಿದು ನೋಡಿ. ಬಿಜಾಪುರ ಜಿಲ್ಲೆಯಲ್ಲಿ ನೀರಾವರಿ ಈ ಮಟ್ಟಕ್ಕೆ ಅಭಿವೃದ್ಧಿಗೊಳಿಗೆ, ಬರದ ನಾಡಾಗಿದ್ದ ಬಿಜಾಪುರವನ್ನು ಹಸಿರು ನಾಡು ಮಾಡಿದ್ದು ನಾವು ಎಂದು ನುಡಿದರು.
ಹಿಂದೆ ಬರಗಾಲ ಬಂದಾಗ ಜನ ನಿಂಬೆ ಗಿಡ ಕಿತ್ತು ಹಾಕುತ್ತಿದ್ದರು. ಅದೇ ದಿನ‌ ನಾನು ಇಂಡಿಗೆ ಬಂದಿದ್ದೆ. ನಿಂಬೆ ಬೆಳೆಗಾರರಿಗೆ ಭರವಸೆ ನೀಡಿದ್ದೆ. ಇಂದು ನಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನ ಬಿಡುಗಡೆ ಮಾಡಿ ನುಡಿದಂತೆ ನಡೆಯುವ ಕಾಂಗ್ರೆಸ್ಸಿನ ಪರಂಪರೆಯನ್ನು ಮುಂದುವರೆಸಿದ್ದೇವೆ ಎಂದರು.
ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ ಎಂದರು.
500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದು, 1.23 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಹಣ ಪಡೆದಿರುವುದು, 1.64 ಕೋಟಿ ಮನೆಗಳಿಗೆ ಉಚಿತವಾಗಿ 200 ಯೂನಿಟ್ ಹಣ ಪಡೆಯುತ್ತಿರುವುದು, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಮೂಲಕ ಕೋಟಿ ಕೋಟಿ ಕನ್ನಡಿಗರ ಬದುಕಿಗೆ ನೆರವಾಗಿರುವುದು ಅಭಿವೃದ್ಧಿ ಅಲ್ಲವೇ ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಗ್ಯಾರಂಟಿಗಳಲ್ಲದೆ 83 ಸಾವಿರ ಕೋಟಿ ರೂಪಾಯಿ ಹಣ ಅಭಿವೃದ್ಧಿಗೆ ತೆಗೆದಿಟ್ಟುರುವುದು ನಮ್ಮ ಅಭಿವೃದ್ಧಿಪರವಾದ ಆಡಳಿತಕ್ಕೆ ಸ್ಪಷ್ಟ ನಿದರ್ಶನ. ಆದ್ದರಿಂದ ಬಿಜೆಪಿ-ಜೆಡಿಎಸ್ ನ ಸುಳ್ಳು ಆರೋಪಗಳನ್ನು ನಂಬಬೇಡಿ. ನಿಮ್ಮ ಕಣ್ಣೆದುರಿಗೇ ಇರುವ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರ ಮುಖಕ್ಕೆ ಹಿಡಿದು ಉತ್ತರಿಸಿ ಎಂದು ಕರೆ ನೀಡಿದರು.
ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರಿಗೆ ಸರ್ಕಾರದಿಂದ ಹಣ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆ ಎನ್ನುವುದರಲ್ಲಿ ಬಹಳ ಪ್ರಾಮಾಣಿಕರು ಮತ್ತು ಚಾಣಾಕ್ಷರು. ನಮ್ಮದು ಸರ್ವರ ಅಭಿವೃದ್ಧಿಗೆ ಬದ್ದವಾಗಿರುವ ಸರ್ಕಾರ ಎಂದರು.
ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರ ಅಧ್ಯಕ್ಷತೆಯ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವಾನಂದ ಎಸ್.ಪಾಟೀಲ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವು ಮಂದಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ :ಡಿಸಿಎಂ

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕ್ಷೇತ್ರದ ಜನರ ಬದುಕು ಹಸನುಗೊಳಿಸುವ ಸಲುವಾಗಿ ವಿಶೇಷ ಯೋಜನೆಗಳಿಗಾಗಿ ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರು ಕೇಳಿದ್ದರು. ಇಂದು ನಾವು 4,555 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳಿಗೆ ಅನುದಾನವನ್ನು ಒದಗಿಸಿದ್ದೇವೆ. ಇಂಡಿ ತಾಲೂಕಿನ 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಮೆಗಾ ಮಾರ್ಕೆಟ್‌, ಬ್ರಿಡ್ಜ್‌ ಕಂ ಬ್ಯಾರೇಜ್‌, ವಸತಿ ನಿಲಯ ಸೇರಿದಂತೆ ನಾನಾ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ನೀರಾವರಿ ಯೋಜನೆಗಳಿಂದ 93 ಸಾವಿರ ಎಕರೆ ಭೂಮಿಗೆ ಅನುಕೂಲವಾಗಲಿದೆ. ಇಂಡಿ ಜನರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಿದೆ.
ರಾಜ್ಯದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಬೆಲೆಯೇರಿಕೆ ಬಿಸಿ ತಗ್ಗಿಸಲು ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಜನರ ಜೀವನ ಬದಲಾವಣೆ ಮಾಡಿವೆ. ಇಂದು ಶಕ್ತಿ ಯೋಜನೆಯಡಿ 500ನೇ ಕೋಟಿ ಟಿಕೆಟ್ ಅನ್ನು ವಿತರಿಸಿದ್ದೇವೆ. ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. 2028ರಲ್ಲಿಯೂ ಕಾಂಗ್ರೆಸ್‌ ಸರ್ಕಾರಕ್ಕೆ ಆಶೀರ್ವದಿಸಿ, ಅಭಿವೃದ್ಧಿಗೆ ಕೈಜೋಡಿಸಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಲಿಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.