ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿರುವ ಸಂಭ್ರಮದ ಅಂಗವಾಗಿ ಪಟ್ಟಣದ ಬಸ್ಟ್ಯಾಂಡ್ ಆವರಣದಲ್ಲಿ ಬಸ್ಸಿಗೆ ಪೂಜಾ ಮಾಡಿ ಸಾಂಕೇತಿಕವಾಗಿ ಗ್ಯಾರೆಂಟಿ ಯೋಜನೆಯ ಅಧ್ಯಕ್ಷ ಅಶೋಕಗೌಡ ಕೋಳಾರಿ ಟಿಕೇಟ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ನಮಗೆ ಹೆಮ್ಮೆಇದೆ ಎಂದು ಹೇಳಿದರು.
ಮುಖಂಡ ರಮೇಶ ಬಂಟನೂರ ಮಾತನಾಡಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ನಡೆಸಿಕೊಟ್ಟರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಸಾಧಿಕ್ ಸುಂಬಡ, ಡಾಕ್ಟರ್ ಮಲ್ಲು ಪ್ಯಾಟಿ, ಪ್ರಶಾಂತ ನಾಶಿ, ಅಬ್ದುಲ್ ವಾಬ ಸುಂಬಡ, ಅಪ್ಪುಗೌಡ ಹೊನ್ನಳ್ಳಿ, ಭೀಮು ಬೊಮ್ಮನಹಳ್ಳಿ, ದಯಾನಂದ ನಾರಾಯಣ, ಸದಾಶಿವ ಪಾಟೀಲ, ಬಸವರಾಜ ನಂದುರ, ಬಸ್ ಡಿಪೋ ಮ್ಯಾನೇಜರ್ ಹಾಗೂ ಸಿಬ್ಬಂದಿ ವರ್ಗ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶೈಲ ಹೊಸ್ಮನಿ ಹಾಗೂ ಮಾದೇವಿ ವಡ್ಡರ ಹಾಗೂ ಸರ್ವ ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.