ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ,ಪದವಿ ಹಾಗೂ ವೃತ್ತಿಪರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ, ಪದವಿ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಶುಲ್ಕ ರಹಿತ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:೩೦-೦೯-೨೦೨೫ರೊಳಗಾಗಿ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
