ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜನರಲ್ ಕೆ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:೩೦-೧೧-೨೦೨೫ರೊಳಗಾಗಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
