ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ‘ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಿಲಿಟರಿ ಪಿಂಚಣಿ ರಹಿತಿ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ ೧ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ದಿನಾಂಕ: ೩೦-೧೧-೨೦೨೫ರೊಳಗಾಗಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
